Kundapra.com ಕುಂದಾಪ್ರ ಡಾಟ್ ಕಾಂ

ಕರಾಟೆ ಸ್ಪರ್ಧೆ: ಆರ್. ಎನ್. ಶೆಟ್ಟಿ ಪಿಯು ವಿದ್ಯಾರ್ಥಿಗಳ ಸಾಧನೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ, ಇವರ ಆಶ್ರಯದಲ್ಲಿ, ಉಡುಪಿ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ನಡೆದ ಕರಾಟೆ ಸ್ಪರ್ಧೆಯಲ್ಲಿ, ಕುಂದಾಪುರದ ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ, ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಅಲ್ಕಾ ಜೋಬಿ 52-56ಕೆಜಿ ವಿಭಾಗದಲ್ಲಿ ಪ್ರಥಮ ಹಾಗೂ ಪ್ರತೀಕ್ಷಾ 40-44ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಇವರಿಗೆ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಬೈಂದೂರಿನ ಶಾಸಕರಾದ ಬಿ. ಎಂ. ಸುಕುಮಾರ ಶೆಟ್ಟಿ, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.

Exit mobile version