Site icon Kundapra.com ಕುಂದಾಪ್ರ ಡಾಟ್ ಕಾಂ

ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ ಕಾರ್ಯಾಗಾರ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ, ವ್ಯವಹಾರ ನಿರ್ವಹಣೆ ಶಾಸ್ತ್ರ ವಿಭಾಗ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಶಾಸ್ತ್ರ ಸಂಘ ಜಂಟಿಯಾಗಿ ’ಡಿಜಿಟಲ್ ಮಾರ್ಕೆಟಿಂಗ್ ಮಾಹಿತಿ’ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಿಜಿಟಲ್ ರಾಯ್ ಅಕಾಡೆಮಿ, ಬೆಂಗಳೂರಿನ ಸಂಸ್ಥಾಪಕರಾದ ರಾಜೀವ ಶೆಟ್ಟಿ, ವಿದ್ಯಾರ್ಥಿಗಳಿಗೆ ಡಿಜಿಟಲ್ ಮಾರ್ಕೆಟಿಂಗ್‌ನ ಮಹತ್ವ ಮತ್ತು ಅದರಿಂದ ಮುಂದಿನ ದಿನಗಳಲ್ಲಿ ಸಿಗುವ ಉದ್ಯೋಗಾವಕಾಶಗಳ ಬಗ್ಗೆ ವಿಸ್ತಾರವಾಗಿ ವಿವರಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥೆ ವೀಣಾ ವಾಸುದೇವ ಭಟ್, ವ್ಯವಹಾರ ಮತ್ತು ನಿರ್ವಹಣಾಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಾ ರೈ ಹಾಗೂ ಉಪನ್ಯಾಸಕರುಗಳಾದ ರಾಜೇಶ್ ಶೆಟ್ಟಿ ಮತ್ತು ಸ್ವಸ್ತಿ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಸುಪ್ರೀತಾ ಶೆಟ್ಟಿ ವಂದಿಸಿ, ಆಯಿಷಾ ನಮಿರಾ ಕಾರ್ಯಕ್ರಮವನ್ನು ನಿರ್ವಹಿಸಿದರು.

Exit mobile version