ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಯೋಗ ಮತ್ತು ಪ್ರಕೃತಿ ಚಿಕಿತ್ಸೆಯಂತಹ ಅಭ್ಯಾಸಗಳನ್ನು ರೂಢಿಸಿಕೊಂಡಾಗ ಆರೋಗ್ಯವಂತ ಜೀವನ ನಡೆಸಬಹುದು ಎಂದು ಆಳ್ವಾಸ್ ಕಾಲೇಜಿನ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ ಆಳ್ವ ಹೇಳಿದರು.
ನ್ಯಾಶನಲ್ ಇನ್ಸ್ಟಿಟ್ಯೂಟ್ ಆಫ್ ನ್ಯಾಚರೋಪಥಿ ಪುಣೆ ಹಾಗೂ ಮಿಜಾರಿನ ಆಳ್ವಾಸ್ ಕಾಲೇಜ್ ಆಫ್ ನ್ಯಾಚುರೋಪಥಿ & ಯೋಗಿಕ್ ಸೈನ್ಸ್‌ಸ್ ಹಾಗೂ ಆಸ್ಪತ್ರೆಯ ಸಹಯೋಗದಲ್ಲಿ ಆನಂದಮಯ ಆರೋಗ್ಯಧಾಮದಲ್ಲಿ ಬೃಹತ್ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಆಧುನಿಕ ಜೀವನಶೈಲಿಯ ಹಿನ್ನಲೆಯಿಂದ ಜನರು ಆರೋಗ್ಯದ ಕಡೆ ಗಮನಹರಿಸದೆ ಅನಾರೋಗ್ಯಕ್ಕೆ ತುತ್ತಾಗುತಿದ್ದಾರೆ. ಇವುಗಳಿಂದ ದೂರವಿರಬೇಕಾದರೆ ಪ್ರಕೃತಿ ಚಿಕಿತ್ಸೆ ಮತ್ತು ಯೋಗದಂತಹ ಅಭ್ಯಾಸಗಳನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವುಗಳನ್ನು ಕೇವಲ ಒಂದು ದಿನಕ್ಕೆ ಸೀಮಿತ ಗೊಳಿಸಿದರೆ ಯಾವುದೇ ಪ್ರಯೋಜನವಿಲ್ಲ, ನಿರಂತರವಾಗಿ ಈ ಅಭ್ಯಾಸಗಳನ್ನು ರೂಢಿಸಿಕೊಂಡಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಹಾಗೂ ಈ ಪ್ರಕೃತಿ ಚಿಕಿತ್ಸೆಗಳು ಜನ ಸಾಮಾನ್ಯರಿಗೆ ತಲುಪುವಂತಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಆಳ್ವಾಸ್ ಕಾಲೇಜಿನ ನ್ಯಾಚುರೋಪಥಿ ಮತ್ತು ಯೋಗಿಕ ಸೈನ್ಸ್ ಪ್ರಾಂಶುಪಾಲೆ ಡಾ. ವನಿತಾ ಎಸ್. ಶೆಟ್ಟಿ ಮಾತನಾಡಿ ರೋಗ ಬಂದ ನಂತರ ಚಿಕಿತ್ಸೆ ಪಡೆಯುವುದಲ್ಲ, ರೋಗ ಬರುವುದಕ್ಕೂ ಮುನ್ನ ಮುಂಜಾಗೃತ ಕ್ರಮವಾಗಿ ಪ್ರಕೃತಿ ಚಿಕಿತ್ಸೆಯನ್ನು ಪಡೆಯಬಹುದು ಎಂದರು. ಕಾರ್ಯಕ್ರಮದಲ್ಲಿ ತೆಂಕಮಿಜಾರ ಗ್ರಾಮ ಪಂಚಾಯತ್ ಸದಸ್ಯ ಹರಿಪ್ರಸಾದ ಶೆಟ್ಟಿ ಭಾಗವಹಿಸಿದ್ದರು
ಶಿಬಿರದ ವಿಶೇಷ ಸೌಲಭ್ಯಗಳು
- ನುರಿತ ವೈದ್ಯರಿಂದ ಆರೋಗ್ಯ ಸಲಹೆ
- ಯೋಗ ಚಿಕಿತ್ಸೆ& ತರಬೇತಿ
- ಅಂಗಮರ್ಧನ ಚಿಕಿತ್ಸೆ
- ಪಥ್ಯಾಹಾರದ ಬಗ್ಗೆ ಸಲಹೆ
- ಆಕ್ಯುಪ್ರೇಶರ್& ಆಕ್ಯುಪಂಚರ್ ಚಿಕಿತ್ಸೆ
- ಮಣ್ಣಿನ ಚಿಕಿತ್ಸೆ
- ಜಲಚಿಕಿತ್ಸೆ