ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನಲ್ಲಿ 2020-21ನೇ ಸಾಲಿನ ವರ್ಗ 1ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಶೇ.25ರ ಅನುದಾನದಲ್ಲಿ ವಿದ್ಯಾರ್ಥಿ ವೇತನ ವೈದ್ಯಕೀಯ ವೆಚ್ಚ ಮತ್ತು ಪುಸ್ತಕ ಇಡುವ ಕಪಾಟು ವಿತರಣಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಕಿರಿಮಂಜೇಶ್ವರ ಗ್ರಾಮ ಪಂಚಾಯತ್‌ನ ಅಧ್ಯಕ್ಷರಾದ ಗೀತಾ ಉಪಾಧ್ಯಕ್ಷರಾದ ಶೇಖರ ಖಾರ್ವಿ, ಸದಸ್ಯರು, ಪಂಚಾಯತ್ ಅಭಿವೃದ್ದಿ ಅಧಿಕಾರಿ ಕಾರ್ಯದರ್ಶಿ, ದ್ವೀತಿಯ ದರ್ಜೆ ಲೆಕ್ಕ ಸಹಾಯಕರು, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.