Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಜಂಟಿ ನಿಬಂಧಕರ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ಸಹಕಾರಿ ಸಂಘಗಳ ಮೈಸೂರು ವಿಭಾಗದ ಜಂಟಿ ನಿಬಂಧಕರಾದ ಪ್ರಕಾಶ ರಾವ್ ಭೇಟಿ ನೀಡಿದರು.

ಸಂಘದ ವ್ಯವಹಾರಗಳನ್ನು ಪರಿಶೀಲಿಸಿ ಸಂಘದ ಕಾರ್ಯವೈಖರಿಗೆ ಪ್ರಶಂಸೆ ವ್ಯಕ್ತಪಡಿಸಿದರು. ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಎಸ್. ರಾಜು ಪೂಜಾರಿ ಅವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಸಂಘಗಳ ಸಹಾಯಕ ನಿಬಂಧಕರಾದ ಅರುಣ್ ಕುಮಾರ್ ಎಸ್. ವಿ., ಸಂಘದ ಉಪಾಧ್ಯಕ್ಷ ಎಂ. ವಿನಾಯಕ ರಾವ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ ಅಳ್ವೆಗದ್ದೆ ಉಪಸ್ಥಿತರಿದ್ದರು.

Exit mobile version