ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ನಾಡದೋಣಿ ಮೀನುಗಾರರ ಸೀಮೆ ಎಣ್ಣೆಯ ಸಮಸ್ಯೆ ಹಾಗೂ ಗಂಗೊಳ್ಳಿ ಮೀನುಗಾರಿಕಾ ಬಂದರು ಹೊಸ ಜೆಟ್ಟಿಯಲ್ಲಿ ಹೊಳು ತುಂಬಿಕೊಂಡು ಆಗುತ್ತಿರುವ ಸಮಸ್ಯೆಯ ಬಗ್ಗೆ ಮತ್ತು ಮತ್ಸ್ಯಾಶ್ರಯ ಯೋಜನೆಯ ವಿಳಂಬದ ಕುರಿತು ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಹಾಗೂ ಉಪಾಧ್ಯಕ್ಷ ಸೂರಜ್ ಖಾರ್ವಿ ಅವರು ರಾಜ್ಯದ ಬಂದರು ಮತ್ತು ಮೀನುಗಾರಿಕೆ ಇಲಾಖೆ ಸಚಿವ ಎಸ್.ಅಂಗಾರ ಮತ್ತು ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸಿ ಮೀನುಗಾರರಿಗೆ ಅನುಕೂಲ ಮಾಡಿಕೊಡುವಂತೆ ಒತ್ತಾಯಿಸಿದರು.
ಈ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ ಸಚಿವ ಎಸ್.ಅಂಗಾರ ಮತ್ತು ಶಾಸಕ ಸುಕುಮಾರ ಶೆಟ್ಟಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.