ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕುಂದಾಪುರ ವಲಯದಿಂದ ಹೆಂಗವಳ್ಳಿಯ ಕೊಡಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ರಾಷ್ಟ್ರ ನಾಯಕರ ಭಾವಚಿತ್ರಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರಾದ ಮಂಜುನಾಥ್ ಆಚಾರ್ಯ, ಗ್ರಾಮ ಪಂಚಾಯತ್ನ ಅಧ್ಯಕ್ಷ ರಘುರಾಮ ಶೆಟ್ಟಿ, ಸ್ಥಳಿಯ ದಾನಿಗಳಾದ ವಿಜಯ್ ಕುಮಾರ್ ಶೆಟ್ಟಿ, ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರಾಜಾ ಮಠದ ಬೆಟ್ಟು, ಎಸ್.ಕೆ.ಪಿ.ಎ ದಕ್ಷಿಣ ಕನ್ನಡ ಉಡುಪಿ ಇದರ ಉಪಾಧ್ಯಕ್ಷ ನಾಗರಾಜ್ ರಾಯಪ್ಪನ ಮಠ, ಸಂಸ್ಥೆಯ ಉಪಾಧ್ಯಕ್ಷ ಸುರೇಶ್ ಜಮದಗ್ನಿ, ಕಾರ್ಯದರ್ಶಿ ಅಮೃತ್ ಬೀಜಾಡಿ, ಸಲಹಾ ಸಮಿತಿಯ ಅಧ್ಯಕ್ಷ ಗಿರೀಶ್ ಜಿ ಕೆ, ಮಾಜಿ ಅಧ್ಯಕ್ಷ ಪ್ರಮೋದ್ ಚಂದನ್, ಮಾಜಿ ಉಪಾಧ್ಯಕ್ಷ ಸುಧೀರ್ ಬಿದ್ಕಲ್ ಕಟ್ಟೆ, ಜೊತೆ ಕಾರ್ಯದರ್ಶಿ ಸುರೇಶ್ ಮೊಳಹಳ್ಳಿ, ಸದಸ್ಯರಾದ ರಮೇಶ್ ಹೆಂಗವಳ್ಳಿ, ಮಧುಕರ, ರಮೇಶ್ ಶಂಕರನಾರಾಯಣ, ಪ್ರಕಾಶ್ ಹೆಗ್ಡೆ, ಸಂತೋಷ್, ಕಿರಣ್ ಮೆಂಡನ್ ಮುಂತಾದವರು ಉಪಸ್ಥಿತರಿದ್ದರು.
ಶಿಕ್ಷಕಿ ರಮಿತಾ ಸ್ವಾಗತಿಸಿ, ಮುಖ್ಯ ಶಿಕ್ಷಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.