Kundapra.com ಕುಂದಾಪ್ರ ಡಾಟ್ ಕಾಂ

ಅ.29: ಗಂಗೊಳ್ಳಿಯಲ್ಲಿ ಶಿಕ್ಷಣ ಸಚಿವರೊಂದಿಗೆ ಸಂವಾದ

ಕುಂದಾಪುರ: ಗಂಗೊಳ್ಳಿಯ ಗಂಗೊಳ್ಳಿ ಸಮುದಾಯ ಹಿತರಕ್ಷಣಾ ಸಮಿತಿಯ ಆಶ್ರಯದಲ್ಲಿ ದಿ. ಅಕ್ಷತಾ ದೇವಾಡಿಗ ಮತ್ತು ದಿ. ರತ್ನಾ ಕೊಠಾರಿ ಸ್ಮರಣಾರ್ಥ ವಿದ್ಯಾರ್ಥಿಗಳೊಂದಿಗೆ ಶಿಕ್ಷಣ ಸಚಿವರ ಸಂವಾದ ಕಾರ್ಯಕ್ರಮ ಆ.29ರಂದು ಮಧ್ಯಾಹ್ನ 2 ಗಂಟೆಗೆ ಗಂಗೊಳ್ಳಿಯ ಶ್ರೀ ವಿಜಯ ವಿಠಲ ಮಂಟಪದಲ್ಲಿ ನಡೆಯಲಿದೆ.

ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಕಾರ್ಯಕ್ರಮ ಉದ್ಘಾಟಿಸಿ ’ವಿದ್ಯಾರ್ಥಿನಿಯರ ಸುರಕ್ಷತೆಯಲ್ಲಿ ಸಮಾಜದ ಪಾತ್ರ’ ಕುರಿತು ಕುಂದಾಪುರ ತಾಲೂಕಿನ ವಿವಿಧ ಶಾಲಾ ಕಾಲೇಜುಗಳು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಗಂಗೊಳ್ಳಿ ಗ್ರಾಪಂ ಅಧ್ಯಕ್ಷೆ ರೇಷ್ಮಾ ಆರ್.ಖಾರ್ವಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಅಣ್ಣಾಮಲೈ, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಕುಂದಾಪುರ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ಬಿ.ಎಂ.ಸುಕುಮಾರ್ ಶೆಟ್ಟಿ, ಉಡುಪಿ ಜಿಲ್ಲೆಯ ಡಿಡಿಪಿಐ ಎಚ್.ದಿವಾಕರ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಿತಿಯ ಅಧ್ಯಕ್ಷ ಜಿ.ಭಾಸ್ಕರ ಖಾರ್ವಿ ತಿಳಿಸಿದ್ದಾರೆ.

Exit mobile version