Site icon Kundapra.com ಕುಂದಾಪ್ರ ಡಾಟ್ ಕಾಂ

ಕಾಂಗ್ರೆಸ್ ಸೇರ್ಪಡೆ ಎಂಬುದು ಮಾಜಿ ಶಾಸಕರ ನಾಟಕ: ತ್ರಾಸಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಆರೋಪ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗಂಗೊಳ್ಳಿಯ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎನ್ನುವ ಸುದ್ಧಿ ಸತ್ಯಕ್ಕೆ ದೂರವಾಗಿದ್ದು, ಸೇರ್ಪಡೆಗೊಂಡಿದ್ದಾರೆ ಎನ್ನುವವರು ಈ ಹಿಂದಿನ ಎಲ್ಲಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಗುರುತಿಸಿಕೊಂಡವರಾಗಿರುತ್ತಾರೆ. ಶಾಸಕರ ಅಭಿವೃದ್ಧಿ ಕೆಲಸಗಳನ್ನು ಸಹಿಸದೆ ಹತಾಶರಾಗಿ ಅಪಪ್ರಚಾರ ಮಾಡಲು ಮಾಜಿ ಶಾಸಕರು ಸೇರ್ಪಡೆಯ ನಾಟಕ ಮಾಡುತ್ತಿದ್ದು, ಜನರ ಮನಸ್ಸನ್ನು ಬೇರೆಡೆ ಸೆಳೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಆರೋಪಿಸಿದ್ದಾರೆ.

ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿ ಅವರು ಶಾಸಕತ್ವದ ಅವಧಿಯಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರು ಪುನರ್ ನಿರ್ಮಾಣಕ್ಕೆ ಸುಮಾರು 12 ಕೋಟಿ, ವಿವಿಧ ರಸ್ತೆಗಳ ಕಾಂಕ್ರೀಟಿಕರಣ ಹಾಗೂ ಅಭಿವೃದ್ಧಿಗೆ ಸುಮಾರು 3 ಕೋಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸುಮಾರು 20ಕೋಟಿ ಅನುದಾನ ತಂದು ಗಂಗೊಳ್ಳಿಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ಮುಖಂಡರು ಗಂಗೊಳ್ಳಿ ಭಾಗದಲ್ಲಿ ಅಪಪ್ರಚಾರ ನಡೆಸಿ, ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಕಾಂಗ್ರೆಸ್‌ನ ಅನೇಕ ಮುಖಂಡರು ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಬಿಜೆಪಿ ಸೇರ್ಪಡೆಗೊಳ್ಳಲಿದ್ದು, ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ನೀಡಲಿದ್ದಾರೆ. ಎಲ್ಲಾ ನಿವಂತ ಕಾರ್ಯಕರ್ತರು ಪಕ್ಷದೊಂದಿಗೆ ಹಾಗೂ ಶಾಸಕರೊಂದಿಗೆ ವಿಶ್ವಾಸದಿಂದಿದ್ದು ಕಾಂಗ್ರೆಸ್ ಮುಕ್ತ ಬೈಂದೂರು ಮಾಡಲು ಶ್ರಮಿಸಲಿದ್ದಾರೆ ಎಂದು ಬಿಜೆಪಿ ತ್ರಾಸಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಶೆಟ್ಟಿಗಾರ್ ಮತ್ತು ಪ್ರಧಾನ ಕಾರ್ಯದರ್ಶಿ ಅಶೋಕ ಎನ್.ಡಿ. ತಿಳಿಸಿದ್ದಾರೆ.

ಇದನ್ನೂ ಓದಿ:
ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್‌ಗೆ ಸೇರ್ಪಡೆ https://kundapraa.com/?p=47070 .

Exit mobile version