ಕುಂದಾಪ್ರ ಡಾಟ್ ಕಾಂ ಸುದ್ದಿ.
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಸಂಸ್ಥೆಯ ಇಬ್ಬರು ವಿದ್ಯಾರ್ಥಿಗಳು ಭಾರತೀಯ ಬಾಲ್ ಬ್ಯಾಡ್ಮಿಂಟನ್ ಫೆಡರೇ?ನ್ ಕೊಡಮಾಡಲ್ಪಡುವ ಸ್ಟಾರ್ ಆಫ್ ಇಂಡಿಯಾ ಪ್ರಶಸ್ತಿಗೆ ಭಾಜನರಾಗಿದ್ದಾರೆ .
ರಾಜಸ್ಥಾನದ ಜೈಪುರದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ 66ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ನಿರ್ವಹಣೆ ನೀಡಿದ ಪುರುಷರ ವಿಭಾಗದಲ್ಲಿ ಚೇತನ್ ಬಿ. ಕೆ ಹಾಗೂ ಮಹಿಳೆಯರ ವಿಭಾಗದಲ್ಲಿ ಕವನ ಎಂ. ಎಂ ಈ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ . ಪ್ರಶಸ್ತಿ ವಿಜೇತ ಕ್ರೀಡಾಪಟುಗಳಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ ಎಂ ಮೋಹನ್ ಆಳ್ವ ಅಭಿನಂದನೆ ವ್ಯಕ್ತಪಡಿಸಿದ್ದಾರೆ.