ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ 46ನೇ ನಾಗಮಂಡಲೋತ್ಸವ ಹಾಗೂ ಅಷ್ಟಬಂಧ ಪ್ರತಿಷ್ಢಾಪನಾ ವರ್ಧಂತ್ಯುತ್ಸವ ವಿಜೃಂಭಣೆಯಿಂದ ನಡೆಯಿತು.
ಎ.12ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಧಾರ್ಮಿಕ ಅನುಷ್ಠಾನಗಳು ಆರಂಭಗೊಂಡು ವಿವಿಧ ಧಾರ್ಮಿಕ ಅನುಷ್ಠಾನಗಳು ಶಾಸ್ತ್ರೋಕ್ತವಾಗಿ ಜರಗಿತು. ಬೆಳಿಗ್ಗೆ ಸಂಹಿತಾ ಕಲಶ ಸ್ಥಾಪನೆ, ಪಾರಾಯಣ, ಅಧಿವಾಸ ಹೋಮ, ಕಲಶಾಭಿಷೇಕ, ಮಹಾಮಂಗಳಾರತಿ, ದರ್ಶನ, ತುಲಾಭಾರ ಸೇವೆ, ಮಧ್ಯಾಹ್ನ ಮಹಾಪೂಜೆ, ನಾಗದರ್ಶನ ಬಳಿಕ ಸಾರ್ವಜನಿಕ ಮಹಾ ಅನ್ನಸಂತರ್ಪಣೆ ನಡೆಯಿತು. ಸಂಜೆ 5ಗಂಟೆಗೆ ರಂಗಪೂಜೆ, ಹಾಲಿಟ್ಟು ಸೇವೆ, ವೈ.ವಾಸುದೇವ ವೈದ್ಯ ಮತ್ತು ಬಳಗದವರಿಂದ ಮಂಡಲ ಸೇವೆ ಜರಗಿತು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಪಂ ಸದಸ್ಯೆ ಶೋಭಾ ಜಿ.ಪುತ್ರನ್, ದೇವಸ್ಥಾನದ ಅಧ್ಯಕ್ಷ ಉಮೇಶ ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಯುತ್ ಕ್ಲಬ್ ಪ್ರವೀಣ್ ಮೇಸ್ತ, ಕಾರ್ಯದರ್ಶಿ ಶ್ರೀನಾಥ ಮೇಸ್ತ, ಮಹಿಳಾ ಮಂಡಳಿ ಅಧ್ಯಕ್ಷೆ ರಾಧಾ ರಾಮಕೃಷ್ಣ ಮೇಸ್ತ, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಹರೀಶ ಮೇಸ್ತ, ಮೇಸ್ತ ಸಮಾಜ ಬಾಂಧವರು, ಊರ ಪರ ಊರಿನ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು.