Kundapra.com ಕುಂದಾಪ್ರ ಡಾಟ್ ಕಾಂ

ಜಲಶಕ್ತಿ ಯೋಜನೆ ಮೂಲಕ ಅಂತರ್ಜಲ ವೃದ್ಧಿಸಿ: ದಿನಕರ ಬಾಬು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಲಶಕ್ತಿ ಯೋಜನೆಯ ಮೂಲಕ ಮಳೆ ನೀರನ್ನು ಸಂಗ್ರಹಿಸಿ ಜಿಲ್ಲೆಯಲ್ಲಿ ಅಂರ್ತಜಲ ಮಟ್ಟವನ್ನು ವೃಧ್ದಿಸಲು ಎಲ್ಲಾ ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ಹೇಳಿದರು.

ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ , ನಡದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲಾ ಗ್ರಾಮಗಳಲ್ಲಿರುವ ಕೆರೆಗಳ ಹೊಳೆತ್ತುವಿಕೆ , ಬಾವಿಗಳ ನಿರ್ಮಾಣ, ಕೊಳವೆ ಬಾವಿಗಳಿಗೆ ಜಲ ಮರುಪೂರಣ , ತೋಡುಗಳ ನಿರ್ಮಾಣ ಮಾಡುವ ಮೂಲಕ ಮಳೆ ನೀರನ್ನು ಸಂಗ್ರಹಿಸುವ ಮೂಲಕ ಅಂರ್ತಜಲವನ್ನು ವೃದ್ದಿಸುವನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಿ, ಮಹಾತ್ಮ ಗಾಂಧೀ ಉದ್ಯೋಗ ಖಾತರಿ ಯೋಜನೆಯಡಿ ಈ ಕಾರ್ಯಕ್ರಮಗಳನ್ನು ಕೈಗೊಳ್ಳಲು ಅವಕಾಶವಿದ್ದು, ಇದರಿಂದ ಮಾನವ ದಿನಗಳ ಸೃಷ್ಠಿ ಸಹ ಸಾಧ್ಯವಾಗಲಿದೆ ಎಂದು ಎಲ್ಲಾ ಅಧಿಕಾರಿಗಳಿಗೆ ದಿನಕರ ಬಾಬು ಸೂಚನೆ ಜಿಲ್ಲೆಯಲ್ಲಿ ಈ ಯೋಜನೆಯಡಿ ಇದುವರೆಗೆ 65 ಕೆರೆಗಳ ಹೊಳು ತೆಗೆಯಲಾಗಿದೆ ಎಂದರು.

ಕೋವಿಡ್ ಲಸಿಕೆ ಪಡೆಯುವುದರಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ವೃದ್ದಿಯಾಗಿ, ಸೋಂಕು ತಗುಲಿದರೆ ಅದರ ತೀವ್ರತೆ ಕಡಿಮೆಯಿರಲಿದೆ ಎಂಬ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಪ್ರಮಾಣದಲ್ಲಿ ಲಸಿಕೆ ನೀಡಲು ಅಗತ್ಯ ಕ್ರಮ ಕೈಗೊಳ್ಳಿ, ಲಸಿಕೆ ಕೊರತೆಯಾದಂತೆ ಎಚ್ಚರವಹಿಸಿ ,

ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾರ್ವಜನಿಕರಿಗೆ ಜಗೃತಿ ಮೂಡಿಸಿ ಎಂದು ಅರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೃಷಿ ಇಲಾಖೆಯಿಂದ ಮುಂಗಾರು ಹಂಗಾಮಿಗೆ ಭಿತ್ತನೆ ಬೀಜ ಮತ್ತು ರಸಗೊಬ್ಬರದ ಸೂಕ್ತ ದಾಸ್ತಾನು ಹೊಂದಿರುವAತೆ ಸೂಚಿಸಿದ ದಿನಕರ ಬಾಬು, ಹಡಿಲು ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳುತ್ತಿರುವ ಬಗ್ಗೆ ಮಾಹಿತಿ ಪಡೆದರು.

ಕಾರ್ಕಳ ತಾಲೂಕು ಸೂಡಾ ಗ್ರಾವದ ಪಿಲಾರ್ ಖಾನ್ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಲೊಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಉಪಾಧ್ಯಕ್ಷೆ ಶೀಲಾ ಕೆ ಶೆಟ್ಟಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶೋಭಾ ಜಿ ಪುತ್ರನ್, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಪ್ರತಾಪ್ ಹೆಗ್ಡೆ ಮಾರಾಳಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಸುಮಿತ್ ಶೆಟ್ಟಿ, ಜಿಲ್ಲಾ ಪಂಚಾಯತ್ ಸಿಇಓ ಡಾ.ನವೀನ್ ಭಟ್,

ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ , ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Exit mobile version