Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಯ ಚಿಕಿತ್ಸೆಗೆ ಬರುವ ಒಳರೋಗಿಗಳಿಗೆ ಮೀಸಲಿಡಬೇಕು: ಕೆ. ವಿಕಾಸ್ ಹೆಗ್ಡೆ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲ್ಲೂಕು ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೋವಿಡ್ ರೋಗಿಗಳಿಗೆ ಮೀಸಲಿಟ್ಟದ್ದಿರಿಂದ ಇತರ ಕಾಯಿಲೆಗೆ ಚಿಕಿತ್ಸೆಗೆ ಬರುವ ರೋಗಿಗಳು ಸೂಕ್ತ ಚಿಕಿತ್ಸೆ ದೊರಕದೆ ಅತಂತ್ರರಾಗಿದ್ದರೆ. ಇನ್ನಾದರೂ ಸಂಬಂಧಿತರು ಕುಂದಾಪುರ ತಾಲ್ಲೂಕು ಆಸ್ಪತ್ರೆಯಲ್ಲಿ ಒಂದು ವಿಭಾಗವನ್ನು ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವ ಒಳರೋಗಿಗಳಿಗೆ ಮೀಸಲಿಡಬೇಕು ಎಂದು ಬಸ್ರೂರು ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷ ಕೆ. ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

ತಾಲ್ಲೂಕು ಆಸ್ಪತ್ರೆಗೆ ಚಿಕಿತ್ಸೆಗೆ ಬರುವ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದವರು, ಇವರಿಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗಿ ಚಿಕಿತ್ಸೆ ಪಡೆಯಲು ಇವರಲ್ಲಿ ಸಾಮರ್ಥ್ಯವಿರುವುದಿಲ್ಲಾ ಹಾಗೂ ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಗೆ ಹೋಗುಲು ಹೇಳುತ್ತಿದ್ದು ಅಲ್ಲೂ ಹಾಸಿಗೆ ಇನ್ನಿತರ ಸಮಸ್ಯೆಗಳು ಇರುವ ಬಗ್ಗೆ ರೋಗಿಗಳು ಹಾಗೂ ಅವರ ಸಂಬಂಧಿಕರು ನೋವನ್ನು ತೋಡಿಕೊಳ್ಳುತ್ತಿದ್ದಾರೆ. ಆದ್ದರಿಂದ ಸಂಬಂಧಿತರು ಕೂಡಲೇ ಕುಂದಾಪುರದ ಸರ್ಕಾರಿ ಆಸ್ಪತ್ರೆಯಲ್ಲೇ ಇತರೆ ಕಾಯಿಲೆಗೆ ಚಿಕಿತ್ಸೆಗೆ ಬರುವವರಿಗೆ ಅವಕಾಶ ಮಾಡಿಕೊಡಿ ಎಂದು ವಿಕಾಸ್ ಹೆಗ್ಡೆ ಆಗ್ರಹಿಸಿದ್ದಾರೆ.

Exit mobile version