Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಸೋಮವಾರ 412 ಕೋವಿಡ್ ಪಾಸಿಟಿವ್. 1687 ಸಕ್ರಿಯ ಪ್ರಕರಣ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 412 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 195, ಕುಂದಾಪುರ, ಬೈಂದೂರು ತಾಲೂಕಿನ 154, ಕಾರ್ಕಳ, ಹೆಬ್ರಿ ತಾಲೂಕಿನ 61 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ ಈರ್ವರಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 412 ಪ್ರಕರಣಗಳಲ್ಲಿ 207 ಸಿಂಟಮಿಕ್ ಹಾಗೂ 205 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 45 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 367 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 2416 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1687 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 290 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

Exit mobile version