Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಬುಧವಾರ 664 ಕೋವಿಡ್ ಪಾಸಿಟಿವ್. 326 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 644 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 332, ಕುಂದಾಪುರ, ಬೈಂದೂರು ತಾಲೂಕಿನ 249, ಕಾರ್ಕಳ, ಹೆಬ್ರಿ ತಾಲೂಕಿನ 76 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 664 ಪ್ರಕರಣಗಳಲ್ಲಿ 378 ಸಿಂಟಮಿಕ್ ಹಾಗೂ 286 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 44 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 620 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು ಒಟ್ಟು 3549 ಮಂದಿಯನ್ನು ಪರೀಕ್ಷಿಸಲಾಗಿದೆ. ಒಟ್ಟು 1892 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 326 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ.

ಇದನ್ನೂ ಓದಿ
► ವಾರದಿಂದ ನಾಪತ್ತೆಯಾಗಿದ್ದ ಯಕ್ಷಗಾನ ಕಲಾವಿದ ಉದಯ ಹೆಗಡೆ ಬೆಂಗಳೂರಿನಲ್ಲಿ ಪತ್ತೆ – https://kundapraa.com/?p=47747 .

Exit mobile version