Kundapra.com ಕುಂದಾಪ್ರ ಡಾಟ್ ಕಾಂ

ಪ.ವರ್ಗದ ಕಾನೂನು ವಿದ್ಯಾರ್ಥಿಗಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಪ್ರಸ್ತುತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪರಿಶಿಷ್ಟ ವರ್ಗದ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏಪ್ರಿಲ್ 30 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‌ಸೈಟ್
http://www.sw.kar.nic/in , ಆಯಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ಐಟಿಡಿಪಿ ಯೋಜನಾ
ಸಮನ್ವಯಾಧಿಕಾರಿಗಳ ಕಚೇರಿ ರಜತಾದ್ರಿ, ಮಣಿಪಾಲ ದೂ. ಸಂಖ್ಯೆ: 0820-2574814 ಅನ್ನು ಸಂಪರ್ಕಿಸುವಂತೆ ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version