Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಭಾನುವಾರ 653 ಕೋವಿಡ್ ಪಾಸಿಟಿವ್. 788 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಭಾನುವಾರ 653 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 347, ಕುಂದಾಪುರ, ಬೈಂದೂರು ತಾಲೂಕಿನ 200, ಕಾರ್ಕಳ, ಹೆಬ್ರಿ ತಾಲೂಕಿನ 104 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 653 ಪ್ರಕರಣಗಳಲ್ಲಿ 273 ಸಿಂಟಮಿಕ್ ಹಾಗೂ 380 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 22 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 631 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 2508 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 788 ಮಂದಿಯನ್ನು ಇಂದು ಡಿಸ್ಚಾರ್ಜ್ ಮಾಡಲಾಗಿದೆ. ಇಂದು ಒಟ್ಟು 2926 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

 

Exit mobile version