Site icon Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಸೋಮವಾರ 529 ಕೋವಿಡ್ ಪಾಸಿಟಿವ್. 549 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಸೋಮವಾರ 529 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 250, ಕುಂದಾಪುರ, ಬೈಂದೂರು ತಾಲೂಕಿನ 202, ಕಾರ್ಕಳ, ಹೆಬ್ರಿ ತಾಲೂಕಿನ 73 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 529 ಪ್ರಕರಣಗಳಲ್ಲಿ 195 ಸಿಂಟಮಿಕ್ ಹಾಗೂ 334 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 33 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 496 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಜಿಲ್ಲೆಯಲ್ಲಿ ಇಂದು 549 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2488 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2345 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 1309 ಮಂದಿಗೆ ಮೊದಲ ಡೋಸ್, 1477 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,339 ಮಂದಿಗೆ ಮೊದಲ ಡೋಸ್ ಹಾಗೂ 55,653 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

Exit mobile version