Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಮಂಗಳವಾರ 556 ಕೋವಿಡ್ ಪಾಸಿಟಿವ್. 2 ಸಾವು, 337 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ 556 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 319, ಕುಂದಾಪುರ, ಬೈಂದೂರು ತಾಲೂಕಿನ 171, ಕಾರ್ಕಳ, ಹೆಬ್ರಿ ತಾಲೂಕಿನ 64 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಇಬ್ಬರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಒಟ್ಟು 556 ಪ್ರಕರಣಗಳಲ್ಲಿ 191 ಸಿಂಟಮಿಕ್ ಹಾಗೂ 365 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 18 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 538 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 78 ವರ್ಷದ ವೃದ್ಧ ಹಾಗೂ ಕಾರ್ಕಳದ 46 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 337 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 2705 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3244 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 224 ಮಂದಿಗೆ ಮೊದಲ ಡೋಸ್, 352 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,563 ಮಂದಿಗೆ ಮೊದಲ ಡೋಸ್ ಹಾಗೂ 56,005 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

Exit mobile version