Site icon Kundapra.com ಕುಂದಾಪ್ರ ಡಾಟ್ ಕಾಂ

ಕಾರಂತರ ಸಾಧನೆ ಯುವ ಜನತೆಗೆ ಪ್ರೇರಣೆಯಾಗಲಿ: ಕೆರಾಡಿ ಚಂದ್ರಶೇಖರ್ ಶೆಟ್ಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಕಾರಂತರ ಬದುಕಿನ ಪ್ರತಿ ಹೆಜ್ಜೆಯೂ ಸ್ಪೂರ್ತಿದಾಯಕವಾಗಿದ್ದು, ಅವರ ಬದುಕು-ಬರವಣಿಗೆ ಮುಂದಿನ ಯುವ ಜನಾಂಗಕ್ಕೆ ಪ್ರೇರಣೆಯಾಗಬೇಕು ಆ ನಿಟ್ಟಿನಲ್ಲಿ ಕಾರಂತ ಥೀಮ್ ಪಾರ್ಕ್ ಕಾರಂತರ ಕುರಿತಾದ ಕೆಲಸವನ್ನು ನಿರ್ವಹಿಸುತ್ತಿರುವುದು ಸಂತಸದ ವಿಷಯ ಎಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಅಧ್ಯಕ್ಷ ಕೆರಾಡಿ ಚಂದ್ರಶೇಖರ್ ಶೆಟ್ಟಿ ಹೇಳಿದರು.

ಅವರು ಇತ್ತೀಚಿಗೆ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್‌ಗೆ ಭೇಟಿ ನೀಡಿ ಕಾರಂತರ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ರಂಗ ಮಂದಿರ, ಗ್ರಂಥಾಲಯ, ಅಂಗನವಾಡಿ, ಆರ್ಟ್ ಗ್ಯಾಲರಿ, ವೀಕ್ಷಿಸಿದರು.

ಈ ಸಂದರ್ಭದಲ್ಲಿ ದ.ಕ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಥೀಮ್ ಪಾರ್ಕ್ ವಿಶೇಷ ಕರ್ತವ್ಯಾಧಿಕಾರಿ ಪೂರ್ಣಿಮಾ, ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಶ್ರೀಪ್ರಕಾಶ್ ಹಂದಟ್ಟು, ವಿಕಾಸ ಸೌಧದ ಸಿಬ್ಬಂದಿ ಕೋಟ ಸಂತೋಷ್ ಪೂಜಾರಿ ಉಪಸ್ಥಿತರಿದ್ದರು.

Exit mobile version