Kundapra.com ಕುಂದಾಪ್ರ ಡಾಟ್ ಕಾಂ

ಶಟ್ಲ್ ಬ್ಯಾಡ್ಮಿಂಟನ್‌: ಗಂಗೊಳ್ಳಿ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ: ಹೊಸಂಗಡಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಕವಿನಿನಿಯಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಕುಂದಾಪುರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕರ ಮತ್ತು ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದುಕೊಂಡಿದೆ.

ವಿಜೇತ ತಂಡದ ವಿದ್ಯಾರ್ಥಿಗಳಾದ ವಿನೋದ, ಪ್ರಭಾಕರ ಪೈ ಮತ್ತು ಧೀರಜ್ ಅವರು ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಡಿ’ಕೋಸ್ತ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಕರ ಶೆಟ್ಟಿ ಅವರೊಂದಿಗೆ. ಅನಘಾ ಪೈ, ತೇಜಸ್ವಿನಿ ಮತ್ತು ಶ್ರುತಿ ಅವರು ಶಾಲೆಯ ಮುಖ್ಯೋಪಾಧ್ಯಾಯ ರಾಘವೇಂದ್ರ ಶೇರುಗಾರ್, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶಾಂತಿ ಡಿ’ಕೋಸ್ತ ಹಾಗೂ ದೈಹಿಕ ಶಿಕ್ಷಣ ಶಿಕ್ಷಕರಾದ ರತ್ನಾಕರ ಶೆಟ್ಟಿ ಅವರೊಂದಿಗೆ.

ಜಿಲ್ಲಾ ಮಟ್ಟದಲ್ಲಿ ದ್ವಿತೀಯ

 ಉಡುಪಿಯ ಅಜ್ಜರಕಾಡು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚಿಗೆ ನಡೆದ 2015-16ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ.

Exit mobile version