Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಬುಧವಾರ 1655 ಕೋವಿಡ್ ಪಾಸಿಟಿವ್, 3 ಮಂದಿ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ಗಣನೀಯವಾಗಿ ಏರಿಕೆಯಾಗಿದ್ದು ಬುಧವಾರ 1,655 ಪ್ರಕರಣ ವರದಿಯಾಗಿದೆ. ಈ ಪೈಕಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 879, ಕುಂದಾಪುರ, ಬೈಂದೂರು ತಾಲೂಕಿನ 399, ಕಾರ್ಕಳ, ಹೆಬ್ರಿ ತಾಲೂಕಿನ 370 ಮಂದಿಗೆ ಹಾಗೂ ಹೊರ ಜಿಲ್ಲೆಯಿಂದ ಬಂದ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ. ಮೂವರು ವ್ಯಕ್ತಿಗಳು ಮೃತಪಟ್ಟಿದ್ದಾರೆ.

ಒಟ್ಟು 1654 ಪ್ರಕರಣಗಳಲ್ಲಿ 409 ಸಿಂಟಮಿಕ್ ಹಾಗೂ 1246 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 48 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ 1607 ಮಂದಿ ಹೋಮ್ ಐಸೊಲೇಷನ್ ಆಗಿದ್ದಾರೆ. ಇಂದು ಉಡುಪಿಯ 81 ವರ್ಷ, 65 ವರ್ಷ ವೃದ್ದ ಹಾಗೂ ಉಡುಪಿಯ 53 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 433 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3925 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2200 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ರಾಜ್ಯದಲ್ಲಿಯೂ ಇಂದು ಗರೀಷ್ಠ ಪ್ರಕರಣ ದಾಖಲಾಗಿದ್ದು 50,112 ಮಂದಿಗೆ ಕೊರೋನಾ ಸೊಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಇಂದು 132 ಮಂದಿಗೆ ಮೊದಲ ಡೋಸ್, 95 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯತನಕ ಒಟ್ಟು 1,94,695 ಮಂದಿಗೆ ಮೊದಲ ಡೋಸ್ ಹಾಗೂ 56,100 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ
► ಉಡುಪಿ ಜಿಲ್ಲೆಗೆ ಅಗತ್ಯವಿರುವ ಆಕ್ಸಿಜಿನ್, ರೆಮ್ಡಿಸಿವರ್ ಸರಬರಾಜು ಮಾಡಲು ಕ್ರಮ: ಸಚಿವ ಬೊಮ್ಮಾಯಿ – https://kundapraa.com/?p=47921 .
► ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಲಸಿಕೆ ಲಭ್ಯತೆ ಕುರಿತು ಇಲ್ಲಿದೆ ಮಾಹಿತಿ – https://kundapraa.com/?p=47896 .
► ಕುಂದಾಪುರ ಕೋವಿಡ್ ಆಸ್ಪತ್ರೆಯ ನ್ಯೂನತೆ ಸರಿಪಡಿಸಿ ಮತ್ತು ಕೋವಿಡ್ ಕೇರ್ ಸೆಂಟರ್ ಆರಂಭಿಸಿ: ಎಚ್. ಹರಿಪ್ರಸಾದ್ ಶೆಟ್ಟಿ – https://kundapraa.com/?p=47915 .

Exit mobile version