Site icon Kundapra.com ಕುಂದಾಪ್ರ ಡಾಟ್ ಕಾಂ

ಬೆಳ್ವೆಯಲ್ಲಿ ಯುವಕರಿಬ್ಬರ ದಾರುಣ ಸಾವು

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೆಳ್ವೆ ಜುಮ್ಮಾ ಮಸೀದಿ ಸಮೀಪದಲ್ಲಿ  ರಾತ್ರಿ 10.30ರ ಸುಮಾರಿಗೆ ಸ್ಕೂಟಿ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ ಇಬ್ಬರು ಯುವಕರು ಮಣಿಪಾಲ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮೃತರಾಗಿದ್ದಾರೆ. ಇನ್ನೊಬ್ಬ ಯುವಕ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.

ಬೆಳ್ವೆ ನಿವಾಸಿ ನಾಗರಾಜ್(17) ನಾಲ್ಕೂರು ಗ್ರಾಮದ ಮೂದ್ದೂರು ನಿವಾಸಿ ಪ್ರಜ್ವಲ್(21) ಮೃತಪಟ್ಟವರು ತೀರ್ಥಹಳ್ಳಿ ಮೂಲದ ಹಿಲಿಯಾಣ ನಿವಾಸಿ ವಿನಯ(20)  ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ.

ಡಿವೈಎಸ್‌ಪಿ ಶ್ರೀಕಾಂತ ಕೆ., ಶಂಕರನಾರಾಯಣ ಠಾಣಾಧಿಕಾರಿ ಶ್ರೀಧರ್ ನಾಯ್ಕ್ ಹಾಗೂ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ, ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಾಲಾಗಿದೆ.

Exit mobile version