Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಗುರುವಾರ 892 ಕೋವಿಡ್ ಪಾಸಿಟಿವ್, 6 ಸಾವು, 730 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 892 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 6 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 222, ಕುಂದಾಪುರ, ಬೈಂದೂರು ತಾಲೂಕಿನ 314, ಕಾರ್ಕಳ, ಹೆಬ್ರಿ ತಾಲೂಕಿನ 349 ಮಂದಿಗೆ ಹಾಗೂ ಹೊರ ಜಿಲ್ಲೆಯ 7 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 892 ಪ್ರಕರಣಗಳಲ್ಲಿ 121 ಸಿಂಟಮಿಕ್ ಹಾಗೂ 771 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 17 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 875 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 75 ವರ್ಷದ ವೃದ್ಧ, 65 ವರ್ಷದ ವೃದ್ಧ, 62 ವರ್ಷದ ವೃದ್ಧೆ, 51 ವರ್ಷದ ಮಹಿಳೆ, 55 ವರ್ಷದ ಮಹಿಳೆ, ಕುಂದಾಪುರದ 38 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 730 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7108 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2330 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 604 ಮಂದಿಗೆ ಮೊದಲನೇ ಡೋಸ್, 251 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 1,97,075 ಮಂದಿಗೆ ಮೊದಲ ಡೋಸ್ ಹಾಗೂ 61,016 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ
► ಉಡುಪಿ: ಕೋವಿಡ್ ಲಸಿಕೆ ವಿತರಣೆ ತಾತ್ಕಾಲಿಕ ಸ್ಥಗಿತ – https://kundapraa.com/?p=48152 .

 

Exit mobile version