ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 1220 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 472, ಕುಂದಾಪುರ, ಬೈಂದೂರು ತಾಲೂಕಿನ 540, ಕಾರ್ಕಳ, ಹೆಬ್ರಿ ತಾಲೂಕಿನ 205 ಮಂದಿಗೆ ಹಾಗೂ ಹೊರ ಜಿಲ್ಲೆಯ 3 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 1220 ಪ್ರಕರಣಗಳಲ್ಲಿ 250 ಸಿಂಟಮಿಕ್ ಹಾಗೂ 970 ಅಸಿಂಟಮಿಕ್ ಪ್ರಕರಣಗಳಾಗಿವೆ. ಈ ಪೈಕಿ 19 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 1201 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಉಡುಪಿಯ 81 ವರ್ಷದ ವೃದ್ಧೆ, 53 ವರ್ಷದ ಪುರುಷ, ಕುಂದಾಪುರದ 78 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 706 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 7619 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3095 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಇಂದು ಯಾರಿಗೂ ವಾಕ್ಸಿನೇಷನ್ ಮಾಡಲಾಗಿಲ್ಲ.