Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ: ನಿವೃತ್ತ ಉಪತಹಶೀಲ್ದಾರ್ ಆನಗಳ್ಳಿ ರಘುರಾಮ ಶೆಟ್ಟಿ ನಿಧನ

ಕುಂದಾಪ್ರ ಡಾಟ್ ಕಾಮ ಸುದ್ದಿ.
ಕುಂದಾಪುರ,ಮೇ.16: ಆನಗಳ್ಳಿ ದೂಪದಕಟ್ಟೆ ಮನೆ ರಘುರಾಮ ಶೆಟ್ಟಿ (91 ವ) ಭಾನುವಾರ ವಯೋಸಹಜ ಅಸೌಖ್ಯದಿಂದ ತಮ್ಮ ಸ್ವಗೃಹದಲ್ಲಿ ದೈವಾಧೀನರಾಗಿದ್ದಾರೆ.

ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಉಪ ತಹಶೀಲ್ದಾರರಾಗಿ ನಿವೃತ್ತಿ ಹೊಂದಿದ ಅವರು ಸರಳ ಸಜ್ಜನ ಪ್ರಾಮಾಣಿಕ ವ್ಯಕ್ತಿತ್ವದಿಂದ ಚಿರಪರಿಚಿತರಾಗಿ ಸಾಮಾಜಿಕ ಹಾಗೂ ಧಾರ್ಮಿಕ ರಂಗದಲ್ಲಿ ತೊಡಗಿಸಿಕೊಂಡಿದ್ದರು. ಬಸ್ರೂರು ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾಗಿ ಸೇವೆ ಸಲ್ಲಿಸಿದ್ದರು. ಆನಗಳ್ಳಿ ಹಿರಿಯ ನಾಗರಿಕ ಸಂಘದ ಅಧ್ಯಕ್ಷರಾಗಿ, ಆನಗಳ್ಳಿ ಶ್ರೀ ಲಕ್ಷ್ಮೀ ಚನ್ನಕೇಶವ ದೇವಾಲಯದ ಗೌರವಾಧ್ಯಕ್ಷರಾಗಿ, ಬಸ್ರೂರು ವ್ಯವಸಾಯ ಸೇವಾ ಸಹಕಾರಿ ಸಂಘ ನಿಯಮಿತ ಬಸ್ರೂರು ಇದರ ಉಪಾಧ್ಯಕ್ಷರಾಗಿ ಮತ್ತು ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಮೃತರು ಮೂರು ಪುತ್ರಿಯರು, ಓರ್ವ ಪುತ್ರ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

 

Exit mobile version