Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ತಾಲೂಕಿನ ಪ್ರಾ.ಆರೋಗ್ಯ ಕೇಂದ್ರಗಳಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕಂಡ್ಲೂರು, ಶಂಕರನಾರಾಯಣ, ಸಿದ್ದಾಪುರ ಹಾಗೂ ಬೈಂದೂರು ತಾಲೂಕಿನ ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಭೇಟಿ ನೀಡಿ ಆಸ್ಪತ್ರೆಗಳಲ್ಲಿ ಕೋವೀಡ್ ನಿಯಂತ್ರಣಕ್ಕೆ ಕೈಗೊಂಡ ಕ್ರಮಗಳ ಬಗ್ಗೆ ಪರಿಶೀಲಿಸಿದರು. ತಾಲೂಕು ವೈದ್ಯಾಧಿಕಾರಿಯಾದ ಡಾ. ನಾಗಭೂಷಣ ಉಡುಪ ಮತ್ತು ಆಯಾ ಅಸ್ಪತ್ರೆಯ ವೈದ್ಯಾಧಿಕಾರಿಗಳ ಜೊತೆ ಚರ್ಚಿಸಿದರು.

ಈ ಸಂದರ್ಭದಲ್ಲಿ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಲತಾ ನಾಯಕ್, ಶಂಕರನಾರಾಯಣ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ರೂಪಾ ಪೈ, ಸಿದ್ದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ದೀಕ್ಷಾ ಎನ್, ಹಳ್ಳಿಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾದ ಡಾ. ಪ್ರವೀಣ್ ಕುಮಾರ್, ವಂಡ್ಸೆ ಬಾಕ್ಲ್ ಕಾಂಗ್ರೆಸ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಶೆಟ್ಟಿ, ಕಾವ್ರಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ವಿಜಯ ಪುತ್ರನ್, ಸದಸ್ಯರಾದ ಸಂತೋಷ ಶೆಟ್ಟಿ, ಶಂಕರನಾರಾಯಣ ಗ್ರಾಪಂ ಮಾಜಿ ಅಧ್ಯಕ್ಷರಾದ ಸದಾಶಿವ್ ಶೆಟ್ಟಿ, ಸದಸ್ಯರಾದ ಗುರುದತ್ತ ಶೆಟ್ಟಿ, ರಾಮಚಂದ್ರ್ ದೇವಾಡಿಗ, ಸಿದ್ದಾಪುರ ತಾ.ಪಂ ಮಾಜಿ ಅಧ್ಯಕ್ಷರಾದ ವಾಸುದೇವ ಪೈ, ಗ್ರಾಮ ಪಂಚಾಯತ್ ಸದಸ್ಯರಾದ ಮಂಜುನಾಥ , ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಹಳ್ಳಿಹೊಳೆ ಗ್ರಾ.ಪಂ ಸದಸ್ಯರಾದ ಪ್ರಭಾಕರ್ ನಾಯ್ಕ್ ಮೊದಲಾದವರು ಇದ್ದರು.

► ಸರಕಾರಿ ಆಸ್ಪತ್ರೆಗಳ ಮೂಲಭೂತ ಸೌಕರ್ಯ, ಸಿಬ್ಬಂದಿ ಕೊರತೆ ನಿವಾರಿಸಿ: ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹ – https://kundapraa.com/?p=48169 .

Exit mobile version