Kundapra.com ಕುಂದಾಪ್ರ ಡಾಟ್ ಕಾಂ

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ವಿತರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಕೋವಿಡ್ -19 ಹರಡುತ್ತಿರುವ ಹಿನ್ನೆಲೆಯಲ್ಲಿ ಎನ್.ಎಫ್.ಎಸ್.ಎ, ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಬಿಡುಗಡೆಯಾದ ಆಹಾರಧಾನ್ಯವನ್ನು ಪ್ರಸಕ್ತ ಸಾಲಿನ ಮೇ ಮತ್ತು ಜೂನ್ ತಿಂಗಳಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ಧತಿಯಡಿ ಪಡಿತರ ವಿತರಿಸುವ ಪ್ರಮಾಣದ ವಿವರ ಹೀಗಿದೆ.

ಜಿಲ್ಲೆಯಲ್ಲಿರುವ ಅಂತ್ಯೋದಯ (ಎ.ಎ.ವೈ) ಯೋಜನೆಯ 28,422 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 5 ಕೆ.ಜಿ ಅಕ್ಕಿಯನ್ನು ಪ್ರತಿ ಸದಸ್ಯರಿಗೆ ವಿತರಿಸಲಾಗುತ್ತದೆ. ಆದ್ಯತಾ (ಬಿ.ಪಿ.ಎಲ್) ಯೋಜನೆಯ 1,64,636 ಪಡಿತರ ಚೀಟಿದಾರರಿಗೆ ಉಚಿತವಾಗಿ ಪ್ರತಿ ಯುನಿಟ್ಗೆ 5 ಕೆ.ಜಿ. ಅಕ್ಕಿ ಮತ್ತು ಪ್ರತಿ ಆದ್ಯತಾ ಕಾರ್ಡಿಗೆ 2 ಕೆ.ಜಿ ಗೋಧಿ ಜೊತೆಗೆ, ಪ್ರತಿ ಸದಸ್ಯರಿಗೆ ಹೆಚ್ಚುವರಿಯಾಗಿ 5 ಕೆ.ಜಿ ವಿತರಿಸಲಾಗುವುದು. ಎ.ಪಿ.ಎಲ್ ಯೋಜನೆಯ 28,323 ಪಡಿತರ ಚೀಟಿದಾರರಿಗೆ ಪ್ರತಿ ಕೆ.ಜಿ ಗೆ 15 ರೂ. ನಂತೆ ಏಕ ಸದಸ್ಯ ಪಡಿತರ ಚೀಟಿಗೆ 5 ಕೆ.ಜಿ ಅಕ್ಕಿ ಮತ್ತು ಎರಡು ಅಥವಾ ಹೆಚ್ಚಿನ ಸದಸ್ಯರಿರುವ ಪಡಿತರ ಚೀಟಿಗೆ 10 ಕೆ.ಜಿ ಅಕ್ಕಿಯನ್ನು ವಿತರಿಸಲಾಗುತ್ತದೆ.

ಹೊಸದಾಗಿ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಮೇ ಮತ್ತು ಜೂನ್ ತಿಂಗಳಲ್ಲಿ ತಲಾ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ಹಾಗೂ ಪಡಿತರಕ್ಕಾಗಿ ಒಪ್ಪಿಗೆ ಸೂಚಿಸಿರುವ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿ ಅರ್ಜಿಗಳಿಗೆ ಪ್ರತಿ ಕೆ.ಜಿ ಗೆ 15 ರೂ. ದರದಂತೆ ಪ್ರತಿ ಅರ್ಜಿಗೆ 10 ಕೆ.ಜಿ ಅಕ್ಕಿಯನ್ನು ಆಧಾರ್ ಆಧಾರಿತ ದೃಢೀಕರಣದ ಮೂಲಕ ವಿತರಿಸಲಾಗುವುದು.

ಅಂತರ್ ರಾಜ್ಯ ಅಥವಾ ಅಂತರ್ ಜಿಲ್ಲೆ ಪೋರ್ಟೆಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ವರ್ಗದ ಪಡಿತರ ಚೀಟಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿರುತ್ತದೆ.

ಪಡಿತರ ವಿತರಣೆ ಸಮಯದಲ್ಲಿ ಯಾವುದಾದರೂ ಸಮಸ್ಯೆ ಕಂಡುಬಂದಲ್ಲಿ ಉಡುಪಿ ತಾಲೂಕು ಕಚೇರಿಯ ಆಹಾರ ಶಿರಸ್ತೆದಾರರಾದ ಪಾರ್ವತಿ ಮೊನಂ: 9482027531, ಬ್ರಹ್ಮಾವರ ತಾಲೂಕು ಕಚೇರಿಯ ಆಹಾರ ನಿರೀಕ್ಷಕಿ ಮೌನ ಮೊ.ನಂ: 9742276430, ಕಾಪು ತಾಲೂಕು ಕಚೇರಿಯ ಆಹಾರ ನಿರೀಕ್ಷಕ
ಲೀಲಾನಂದ ಮೊ.ನಂ: 9448544447, ಕುಂದಾಪುರ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಸುರೇಶ್ ಕುಮಾರ್ ಮೊ.ನಂ: 9845169489, ಬೈಂದೂರು ತಾಲೂಕು ಕಚೇರಿಯ ಆಹಾರ ನಿರೀಕ್ಷಕ ವಿನಯ ಕುಮಾರ್ ಮೊ.ನಂ: 7406930566, ಕಾರ್ಕಳ ತಾಲೂಕು ಕಚೇರಿಯ ಆಹಾರ ನಿರೀಕ್ಷಕಿ ಆಶಾ ಮೊ.ನಂ: 7353913722 ಮತ್ತು ಸುಮತಿ ಮೊ.ನಂ: 9008819733, ಹೆಬ್ರಿ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಗುರುಪ್ರಸಾದ್ ಮೊ.ನಂ: 9900410367 ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಚೇರಿ ದೂ.ಸಂಖ್ಯೆ: 0820-2574947 ಅನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಜಿ. ಜಗದೀಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version