Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 855 ಕೋವಿಡ್ ಪಾಸಿಟಿವ್, 7 ಸಾವು, 1223 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 855 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 7 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 380, ಕಾರ್ಕಳ, ಹೆಬ್ರಿ ತಾಲೂಕಿನ 141 ಮಂದಿಗೆ ಹಾಗೂ ಹೊರ ಜಿಲ್ಲೆಯ 10 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 855 ಪ್ರಕರಣಗಳಲ್ಲಿ 15 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 840 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿಯ 63 ವರ್ಷದ ವೃದ್ಧ, 70 ವರ್ಷದ ವೃದ್ಧ, 60 ವರ್ಷದ ವೃದ್ಧ, 45 ವರ್ಷದ ಪುರುಷ, 53 ವರ್ಷದ ಮಹಿಳೆ ಕಾರ್ಕಳದ 60 ವರ್ಷದ ವೃದ್ಧ, 60 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 1223 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5960 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 2424 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 1910 ಮಂದಿಗೆ ಮೊದಲನೇ ಡೋಸ್, 3790 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,0,1,273 ಮಂದಿಗೆ ಮೊದಲ ಡೋಸ್ ಹಾಗೂ 73,309 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಇದನ್ನೂ ಓದಿ:
► ಜೂನ್ 7ರ ತನಕ ಲಾಕ್‌ಡೌನ್ ವಿಸ್ತರಣೆ. ಬೆಳಗ್ಗೆ 10 ಗಂಟೆ ಬಳಿಕ ಓಡಾಡಿದ್ರೆ ಶಿಸ್ತು ಕ್ರಮ: ಸಿಎಂ – https://kundapraa.com/?p=48514 .
► ಪಾಸಿಟಿವ್ ಇದ್ದು ಪ್ರತ್ಯೇಕವಾಗಿರಲು ಸಾಧ್ಯವಿಲ್ಲದಿದ್ದರೆ, ಕೋವಿಡ್ ಕೇರ್ ಸೆಂಟರ್‌ಗೆ ದಾಖಲಾಗುವುದು ಕಡ್ಡಾಯ: ಡಿಸಿ ಜಿ. ಜಗದೀಶ್ – https://kundapraa.com/?p=48512 .

Exit mobile version