Kundapra.com ಕುಂದಾಪ್ರ ಡಾಟ್ ಕಾಂ

ಮರವಂತೆ ಬಡಾಕೆರೆ ಸೊಸೈಟಿಯಿಂದ ಗಂಗೊಳ್ಳಿ ಪೊಲೀಸರಿಗೆ ಮಾಸ್ಕ್, ಸ್ಯಾನಿಟೈಸರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವತಿಯಿಂದ ಗಂಗೊಳ್ಳಿ ಪೊಲೀಸರಿಗೆ ಮತ್ತು ಮಾಸ್ಕ್ ಸ್ಯಾನಿಟೈಸರ್‌ಗಳನ್ನು ನೀಡಲಾಯಿತು.

ಸಂಘದ ಅಧ್ಯಕ್ಷರಾದ ರಾಜು ಪೂಜಾರಿ ಅವರು ಗಂಗೊಳ್ಳಿ ಆರಕ್ಷಕ ಠಾಣೆಯ ಉಪನಿರೀಕ್ಷಕರಾದ ನಂಜಾ ನಾಯ್ಕ ಎನ್. ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷರಾದ ಎಂ.ಚಂದ್ರಶೀಲ ಶೆಟ್ಟಿ, ನಿರ್ದೇಶಕರಾದ ವಿನಾಯಕ ರಾವ್ ಮರವಂತೆ, ಮುಖ್ಯಕಾರ್ಯನಿರ್ವಹಣಾಧಿಕಾರಿ ಸುರೇಶ ಅಳಿವೆಗದ್ದೆ ಉಪಸ್ಥಿತರಿದ್ದರು.

Exit mobile version