Kundapra.com ಕುಂದಾಪ್ರ ಡಾಟ್ ಕಾಂ

ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್: ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್, ಸ್ಯಾನಿಟೈಸರ್ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಶ್ರೀ ರಾಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್‌ನಿಂದ ಶನಿವಾರ ಬೈಂದೂರು ಸಾರ್ವಜನಿಕ ಆಸ್ಪತ್ರೆಗೆ ಮಾಸ್ಕ್, ಸ್ಯಾನಿಟೈಸರ್‌ನ್ನು ವಿತರಿಸಲಾಯಿತು.

ಶ್ರೀ ರಾಮ ಸೌಹಾರ್ದ ಕೋ- ಆಪರೇಟಿವ್‌ನ ಅಧ್ಯಕ್ಷ ಎಸ್. ರಾಜು ಪೂಜಾರಿ ಅವರು ಬೈಂದೂರು ಸಾರ್ವಜನಿಕ ಆಸ್ಪತ್ರೆಯ ಆರೋಗ್ಯಾಧಿಕಾರಿ ಡಾ. ನಂದಿನಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಾ. ಮಹೇಂದ್ರ ಶೆಟ್ಟಿ, ಸಂಘದ ಉಪಾದ್ಯಕ್ಷ ಎಂ. ವಿನಾಯಕ ರಾವ್, ನಿರ್ದೇಶಕರಾದ ರಾಮಕೃಷ್ಣ ಖಾರ್ವಿ, ಶಿವರಾಮ ಪೂಜಾರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಿಟ್ಟಣ್ಣ ರೈ ಮೊದಲಾದವರು ಉಪಸ್ಥಿತರಿದ್ದರು.

Exit mobile version