ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶನಿವಾರ 684 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು, 3 ಮಂದಿ ಕೋವಿಡ್ ಸೊಂಕಿನಿಂದ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 290, ಕುಂದಾಪುರ, ಬೈಂದೂರು ತಾಲೂಕಿನ 267, ಕಾರ್ಕಳ, ಹೆಬ್ರಿ ತಾಲೂಕಿನ 123 ಮಂದಿಗೆ ಹಾಗೂ ಹೊರ ಜಿಲ್ಲೆಯ 4 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಒಟ್ಟು 684 ಪ್ರಕರಣಗಳಲ್ಲಿ 23 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 661 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.
ಇಂದು ಉಡುಪಿಯ 73 ವರ್ಷದ ವೃದ್ಧೆ, 68 ವರ್ಷದ ವೃದ್ಧೆ, ಕುಂದಾಪುರದ 62 ವರ್ಷದ ವೃದ್ಧ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಇಂದು 848 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 5775 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3611 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.
ಜಿಲ್ಲೆಯಲ್ಲಿ ಇಂದು 6981 ಮಂದಿಗೆ ಮೊದಲನೇ ಡೋಸ್, 623 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,38,859 ಮಂದಿಗೆ ಮೊದಲ ಡೋಸ್ ಹಾಗೂ 79,246 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.
ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.