Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಶುಕ್ರವಾರ 561 ಕೋವಿಡ್ ಪಾಸಿಟಿವ್, 3 ಸಾವು, 585 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಶುಕ್ರವಾರ 561 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 3 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 324, ಕುಂದಾಪುರ, ಬೈಂದೂರು ತಾಲೂಕಿನ 227, ಕಾರ್ಕಳ, ಹೆಬ್ರಿ ತಾಲೂಕಿನ 106 ಮಂದಿಗೆ ಹಾಗೂ ಹೊರ ಜಿಲ್ಲೆಯ 2 ಮಂದಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 561 ಪ್ರಕರಣಗಳಲ್ಲಿ 9 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 552 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಕಾರ್ಕಳ ತಾಲೂಕಿನ 85 ವರ್ಷದ ಮಹಿಳೆ, 89 ವರ್ಷದ ಪುರುಷ, ಉಡುಪಿ ತಾಲೂಕಿನ 66 ವರ್ಷದ ಪುರುಷ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 585 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 4506 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3326 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 5494 ಮಂದಿಗೆ ಮೊದಲನೇ ಡೋಸ್, 1311 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,63,845 ಮಂದಿಗೆ ಮೊದಲ ಡೋಸ್ ಹಾಗೂ 85,796 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

 

Exit mobile version