Site icon Kundapra.com ಕುಂದಾಪ್ರ ಡಾಟ್ ಕಾಂ

ತ್ರಾಸಿ ಗ್ರಾಮ ಪಂಚಾಯತಿಯಿಂದ ವಿಶ್ವ ಪರಿಸರ ದಿನ ಆಚರಣೆ

ಕುಂದಾಪ್ರ ಡಾಟ್ ಕಾಂ ಉಸದ್ದಿ.
ಕುಂದಾಪುರ: ಗ್ರಾಮ ಪಂಚಾಯತ್ ತ್ರಾಸಿ ವತಿಯಿಂದ ಜಿಲ್ಲಾ ಪಂಚಾಯತ್ ಉಡುಪಿ, ತಾಲೂಕು ಪಂಚಾಯತ್ ಕುಂದಾಪುರ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ತ್ರಾಸಿ ಗ್ರಾಮ ಪಂಚಾಯತ್ ಕಾರ್ಯಾಲಯ ಸಮೀಪ ಶನಿವಾರ ಜರಗಿತು.

ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ದೇವಾಡಿಗ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಉಪಾಧ್ಯಕ್ಷೆ ಹೇಮಾ, ಸದಸ್ಯ ರಾಜು ಮೆಂಡನ್, ಪಿಡಿಒ ಶೋಭಾ ಎಸ್., ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ಸಂಗೀತಾ, ಲೆಕ್ಕ ಸಹಾಯಕ ಶಿವಾನಂದ, ಗ್ರಾಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version