Kundapra.com ಕುಂದಾಪ್ರ ಡಾಟ್ ಕಾಂ

ಬೈಂದೂರು ಪದವಿ ಕಾಲೇಜು ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಆಶ್ರಯದಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂಬ ಕಾರ್ಯಕ್ರಮವನ್ನು ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶನಿವಾರ ಹಮ್ಮಿಕೊಳ್ಳಲಾಗಿತ್ತು.

ಕಾಲೇಜಿನ ಎನ್ನೆಸ್ಸೆಸ್ ಘಟಕದ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ತಮ್ಮ ಮನೆ ಸುತ್ತಮುತ್ತಲಿನ ಪರಿಸರದಲ್ಲಿ ಗಿಡ ನೆಡುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ರಘು ನಾಯ್ಕ್ ಹಾಗೂ ಎನ್ನೆಸ್ಸೆಸ್ ಘಟಕದ ಯೋಜನಾಧಿಕಾರಿಗಳಾದ ಲತಾ ಪೂಜಾರಿ ಹಾಗೂ ನಾಗರಾಜ್ ಶೆಟ್ಟಿ ಹಾಗೂ ಉಪನ್ಯಾಸಕರುಗಳು ಮತ್ತು ವಿದ್ಯಾರ್ಥಿಗಳು ಸಹಕರಿಸಿದರು.

Exit mobile version