ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಯಡಮೊಗೆ ನಿವಾಸಿ ಉದಯ ಗಾಣಿಗ ಅವರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಯಡಮೊಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳ್ ಹಾಗೂ ಈ ಕೃತ್ಯದಲ್ಲಿ ಭಾಗಿಯಾಗಿರುವ ಇತರರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಬೈಂದೂರು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಆಗ್ರಹಿಸಿದ್ದಾರೆ.
ಕಟ್‌ಬೆಲ್ತೂರಿನಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿ ಬಿಜೆಪಿ ಕಾರ್ಯಕರ್ತರು ಕೆಲವೆಡೆ ಲಾಕ್‌ಡೌನ್ ಹೆಸರಿನಲ್ಲಿ ದಬ್ಬಾಳಿಕೆ ರಾಜಕೀಯ ನಡೆಸುತ್ತಿದ್ದಾರೆ. ಬೈಂದೂರು ಕ್ಷೇತ್ರದಲ್ಲಿಯೂ ನೈತಿಕ ಪೊಲೀಸ್‌ಗಿರಿ ಹೆಚ್ಚಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕ್ಷುಲ್ಲಕ ಕಾರಣಕ್ಕೆ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧವಾಗಿದ್ದು ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಮತ್ತು ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳಿಗೂ ಶಿಕ್ಷೆಯಾಗಬೇಕು ಎಂದರು.
ಮೃತ ಉದಯ ಗಾಣಿಗರಿಗೆ ಪತ್ನಿ ಹಾಗೂ ಎರಡು ಮಕ್ಕಳಿದ್ದು ಕುಟುಂಬಕ್ಕೆ ಆಸರೆಯಾಗಿದ್ದವರನ್ನು ಕೊಲೆ ಮಾಡಲಾಗಿದೆ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಕೆಲಸವಾಗಬೇಕು ಎಂದರು.
ಬೈಂದೂರು ಶಾಸಕರು ರಾಜಿನಾಮೆ ನೀಡಲಿ:
ಬೈಂದೂರು ಶಾಸಕರು ಕೊಲೆ ಆರೋಪಿಗಳನ್ನು ರಕ್ಷಿಸುತ್ತಿರುವ ಬಗ್ಗೆ ಕೇಳಿಬರುತ್ತಿದೆ. ಓರ್ವ ಸಜ್ಜನ ವ್ಯಕ್ತಿಯನ್ನು ಕೊಲೆಗೈದವರಿಗೆ ನೆರವು ನೀಡುವುದು ಹೀನ ಕೃತ್ಯ. ಇಂತಹ ಹೀನ ಕೃತ್ಯದಲ್ಲಿ ಭಾಗಿಯಾದವರಿಗೆ ನೆರವು ನೀಡುವ ಶಾಸಕರು ರಾಜಿನಾಮೆ ನೀಡಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ವಂಡ್ಸೆ ಬ್ಲಾಕ್ ಅಧ್ಯಕ್ಷ ಪ್ರದೀಪ್‌ಕುಮಾರ್ ಶೆಟ್ಟಿ ಗುಡಿಬೆಟ್ಟು, ಮುಖಂಡರಾದ ಪ್ರಸನ್ನಕುಮಾರ್ ಶೆಟ್ಟಿ, ಶರತ್‌ಕುಮಾರ್ ಶೆಟ್ಟಿ, ಪ್ರಶಾಂತ್ ಪೂಜಾರಿ ಮೊದಲಾದವರು ಇದ್ದರು.
ಇದನ್ನೂ ಓದಿ:
► ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ – https://kundapraa.com/?p=49029 .
► ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ – https://kundapraa.com/?p=48994 .
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .