Site icon Kundapra.com ಕುಂದಾಪ್ರ ಡಾಟ್ ಕಾಂ

ಉದಯ ಗಾಣಿಗ ಕೊಲೆ ಪ್ರಕರಣ: ನಿಷ್ಪಕ್ಷಪಾತ ತನಿಖೆಗೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ಆಗ್ರಹ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಶಂಕರನಾರಾಯಣ: ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದು, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಲು ಮನವಿ ಮಾಡಿತು.

ಈ ಸಂದರ್ಭ ಮಾತನಾಡಿ ಅಧ್ಯಕ್ಷ ಪ್ರಭಾಕರ ಬಿ. ಕುಂಭಾಶಿ ಮಾತನಾಡಿ ಪಾಪದ ವ್ಯಕ್ತಿಯನ್ನು ಕರೆಸಿ ಪೂರ್ವದ್ವೇಷದಿಂದ ಕೊಲೆ ಮಾಡಿರುವುದು ಅಕ್ಷಮ್ಯ ಅಪರಾಧ. ಈ ಕೃತ್ಯದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಎಂಬ ಬಗ್ಗೆ ನಿಷ್ಪಕ್ಷಪಾತ ತನಿಕೆಯಾಗಬೇಕು. ಆ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದರು.

ಬೆಳಿಗ್ಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಗೆ ನ್ಯಾಯ ಒದಗಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಕುಂದಾಪುರ ಡಿವೈಎಸ್ಪಿ, ಶಂಕರನಾರಾಯಣ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಸಿ ನೊಂದ ಕುಟುಂಬಕ್ಕೆ ನ್ಯಾಯ ನೀಡಲು ಆಗ್ರಹಿಸಲಾಯಿತು. ಉದಯ ಗಾಣಿಗರ ಕುಟುಂಬಕ್ಕೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಕುಂದಾಪುರ ತಾಲೂಕು ಗಾಣಿಗ ಸೇವಾ ಸಂಘದ ಗೌರವಾಧ್ಯಕ್ಷ ಕೆ. ಎಂ. ಲಕ್ಷ್ಮಣ, ಕಾರ್ಯದರ್ಶಿ ನಾಗರಾಜ ಗಾಣಿಗ ಬಸ್ರೂರು, ಕೋಶಾಧಿಕಾರಿ ನಾಗರಾಜ ಗಾಣಿಗ ಹಿಲ್ಕೋಡು, ಉಪಾಧ್ಯಕ್ಷರಾದ ರವಿ ಗಾಣಿಗ ಆಜ್ರಿ, ಹಾಲಾಡಿ ಸೀತಾರಮ ಗಾಣಿಗ, ಮಾಜಿ ಅಧ್ಯಕ್ಷ ಕೊಗ್ಗ ಗಾಣಿಗ, ಆಡಳಿತ ಮಂಡಳಿಯ ಸದಸ್ಯರಾದ ಚಂದ್ರಶೇಖರ ಬೀಜಾಡಿ, ಸುಬ್ರಹ್ಮಣ್ಯ ಜಿ. ಉಪ್ಪುಂದ, ರವಿ ಗಾಣಿಗ ಕೆಂಚನೂರು, ಬೈಂದೂರು ವಲಯ ಗಾಣಿಗ ಸಂಘದ ಅಧ್ಯಕ್ಷ ಗಣೇಶ್ ಉಪ್ಪುಂದ ಉಪಸ್ಥಿತರಿದ್ದರು.

ಇದನ್ನೂ ಓದಿ:
► ಯಡಮೊಗೆ ಉದಯ ಗಾಣಿಗ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳಿಗೂ ಶಿಕ್ಷೆಯಾಗಲಿ: ಕೆ. ಗೋಪಾಲ ಪೂಜಾರಿ ಆಗ್ರಹ – https://kundapraa.com/?p=49022 .
► ಯಡಮೊಗೆ ಕೊಲೆ ಪ್ರಕರಣ. ಗ್ರಾಮ ಪಂಚಾಯತ್ ಅಧ್ಯಕ್ಷ ಪೊಲೀಸರ ವಶಕ್ಕೆ – https://kundapraa.com/?p=48994 .
► ಕಾರು ಡಿಕ್ಕಿಯಾಗಿ ವ್ಯಕ್ತಿ ಸಾವು. ಗ್ರಾಮ ಪಂಚಾಯತಿ ಅಧ್ಯಕ್ಷನಿಂದಲೇ ಕೊಲೆ? – https://kundapraa.com/?p=48989 .

Exit mobile version