Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ: ಕರೋನಾ ಸೋಂಕಿತರ ಮನೆಗಳಿಗೆ ಕುಂದಾಪುರ ಎಸಿ ಭೇಟಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮದ ಕರೋನಾ ಸೋಂಕಿತರ ಮನೆಗಳಿಗೆ ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್ ಕೆ. ರಾಜು ಭೇಟಿ ನೀಡಿ ಕರೋನಾ ಸೋಂಕಿತರಿಗೆ ಧೈರ್ಯ ತುಂಬಿದರು.

ಸೋಂಕು ಪೀಡಿತರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದ ಕೆ.ರಾಜು, ಕುಟುಂಬ ಸದಸ್ಯರಿಗೆ ಸೋಂಕು ಹರಡಿದ ಬಗ್ಗೆ ಮಾಹಿತಿ ಪಡೆದುಕೊಂಡರು. ಜ್ವರದಿಂದ ಬಳಲುತ್ತಿರುವ ವ್ಯಕ್ತಿಗಳು ಸ್ಥಳೀಯ ಖಾಸಗಿ ವೈದ್ಯರಿಂದ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದು, ಸೋಂಕಿನ ಲಕ್ಷಣ ಇದ್ದರೂ ಕೋವಿಡ್ ತಪಾಸಣೆಗೆ ಸೂಚಿಸದ ವೈದ್ಯರ ವಿರುದ್ಧ ಗರಂ ಆದರು. ಖಾಸಗಿ ವೈದ್ಯರು ಸೋಂಕು ಲಕ್ಷಣ ಇದ್ದವರನ್ನು ಕೂಡಲೇ ಕೋವಿಡ್ ತಪಾಸಣೆಗೆ ಒಳಪಡಿಸಬೇಕು. ಕರೋನಾ ಪಾಸಿಟಿವ್ ಇದ್ದರೆ ಸೋಂಕಿತರಿಗೆ ಹೋಮ್ ಐಸೋಲೇಶನ್ ಅಥವಾ ಕೋವಿಡ್ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲು ಕ್ರಮಕೈಗೊಳ್ಳಬೇಕು. ಇದರಲ್ಲಿ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ನಾಗಭೂಷಣ ಉಡುಪ, ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ರಂಜಿತ್, ವಂಡ್ಸೆ ಹೋಬಳಿ ಕಂದಾಯ ನಿರೀಕ್ಷಕ ರಾಘವೇಂದ್ರ ದೇವಾಡಿಗ, ಗಂಗೊಳ್ಳಿ ಗ್ರಾಪಂ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಪಿಡಿಒ ಉಮಾಶಂಕರ, ಗಂಗೊಳ್ಳಿ ಪೊಲೀಸ್ ಠಾಣೆಯ ಎಎಸ್ಸೈ ವೆಂಕಟೇಶ ಗೊಲ್ಲ, ಗ್ರಾಪಂ ಸದಸ್ಯರು, ಟಾಸ್ಕ್‌ಪೋರ್ಸ್ ಸಮಿತಿ ಸದಸ್ಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Exit mobile version