Site icon Kundapra.com ಕುಂದಾಪ್ರ ಡಾಟ್ ಕಾಂ

ಬಸ್-ಟ್ರಕ್ ಅಪಘಾತ: ಒಬ್ಬ ಗಂಭೀರ, 12 ಮಂದಿಗೆ ಗಾಯ

ಕುಂದಾಪುರ: ಇಲ್ಲಿನ ತ್ರಾಸಿ ಬೀಚ್ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭಾರಿ ಅಪಘಾತದಲ್ಲಿ ಟ್ರಕ್ ಚಾಲಕನಿಗೆ ಗಂಭೀರ ಗಾಯಗಳಾಗಿದ್ದರೇ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 12ಕ್ಕೂ ಹೆಚ್ಚು ಮಂದಿಗೆ ಸಣ್ಣಪುಟ್ಟ ಗಾಯಗಳಾದ್ದು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಏನಾಯ್ತು?

ಭಟ್ಕಳ ಕುಂದಾಪುರಕ್ಕೆ ವೇಗಗಾಗಿ ಚಲಿಸುತ್ತಿದ್ದ ಖಾಸಗಿ ಎಂಪಿಎಂ ಬಸ್ಸು ಮತ್ತು ಕುಂದಾಪುರ ಕಡೆಯಿಂದ ಭಟ್ಕಳದೆಡೆಗೆ ಸಾಗುತ್ತಿದ್ದ  ಟ್ರೇಲರ್ ಲಾರಿ ತ್ರಾಸಿ ಬೀಚ್ ಸಮೀಪ ಮುಖಾಮುಖಿ ಡಿಕ್ಕಿಯಾಗಿತ್ತು, ಎರಡೂ ವಾಹನಗಳು ವೇಗವಾಗಿ ಬಂದು ಡಿಕ್ಕಿ ಹೊಡೆದಿದ್ದರಿಂದ ಬಸ್ ಹಾಗೂ ಟ್ರಕ್ಕಿನ ಮುಂಭಾಗ ಸಂಪೂರ್ಣ ಪುಡಿಯಾಗುತ್ತು.

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಲಾರಿ ಚಾಲಕನ್ನು ಮಣಿಪಾಲದ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 12 ಮಂದಿ  ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಅಪಘಾತದಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಸಮಯದ ವರೆಗೆ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾಯಿತು. ಸ್ಥಳಕ್ಕಾಗಿಮಿಸಿದ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಖಾಸಗಿ ವೇಗದೂತ ಬಸ್ಸು ಚಾಲಕರು ಮನಬಂದಂತೆ ಬಸ್ಸು ಚಲಾಯಿಸುವುದು

Exit mobile version