Kundapra.com ಕುಂದಾಪ್ರ ಡಾಟ್ ಕಾಂ

ಉಡುಪಿ ಜಿಲ್ಲೆಯಲ್ಲಿ ಗುರುವಾರ 289 ಕೋವಿಡ್ ಪಾಸಿಟಿವ್, 2 ಸಾವು, 241 ಮಂದಿ ಗುಣಮುಖ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಗುರುವಾರ 289 ಕೋವಿಡ್ ಪಾಸಿಟಿವ್ ಪ್ರಕರಣ ವರದಿಯಾಗಿದ್ದು 2 ಮಂದಿ ಮೃತಪಟ್ಟಿದ್ದಾರೆ. ಪಾಸಿಟಿವ್ ಪ್ರಕರಣಗಳಲ್ಲಿ ಉಡುಪಿ, ಬ್ರಹ್ಮಾವರ, ಕಾಪು ತಾಲೂಕಿನ 126, ಕುಂದಾಪುರ, ಬೈಂದೂರು ತಾಲೂಕಿನ 122, ಕಾರ್ಕಳ, ಹೆಬ್ರಿ ತಾಲೂಕಿನ 40 ಮಂದಿಗೆ ಹಾಗೂ ಹೊರ ಜಿಲ್ಲೆಯ ಓರ್ವ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಒಟ್ಟು 289 ಪ್ರಕರಣಗಳಲ್ಲಿ 13 ಮಂದಿ ಕೋವಿಡ್ ಕೇರ್ ಸೆಂಟರ್, ಕೋವಿಡ್ ಆಸ್ಪತ್ರೆ ಹಾಗೂ ಕೋವಿಡ್ ಹೆಲ್ತ್ ಆಸ್ಪತ್ರೆಗೆ ದಾಖಲಾಗಿದ್ದರೆ, 276 ಮಂದಿಯನ್ನು ಹೋಮ್ ಐಸೊಲೇಷನ್ ಮಾಡಲಾಗಿದೆ.

ಇಂದು ಉಡುಪಿ ತಾಲೂಕಿನ 74 ವರ್ಷದ ಪುರುಷ, ಕಾರ್ಕಳ ತಾಲೂಕಿನ 72 ವರ್ಷದ ಮಹಿಳೆ ಕೋವಿಡ್ನಿಂದ ಮೃತಪಟ್ಟಿದ್ದಾರೆ. ಇಂದು 241 ಮಂದಿಯನ್ನು ಡಿಸ್ಚಾರ್ಜ್ ಮಾಡಲಾಗಿದ್ದು, 3812 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಇಂದು ಒಟ್ಟು 3606 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ.

ಜಿಲ್ಲೆಯಲ್ಲಿ ಇಂದು 2146 ಮಂದಿಗೆ ಮೊದಲನೇ ಡೋಸ್, 304 ಮಂದಿಗೆ ಎರಡನೇ ಡೋಸ್ ವಾಕ್ಸಿನೇಷನ್ ಮಾಡಲಾಗಿದೆ. ಇಲ್ಲಿಯ ತನಕ ಒಟ್ಟು 2,91,353 ಮಂದಿಗೆ ಮೊದಲ ಡೋಸ್ ಹಾಗೂ 88,574 ಮಂದಿಗೆ ಎರಡನೇ ಡೋಸ್ ವಾಕ್ಸಿನ್ ನೀಡಲಾಗಿದೆ.

ಸೂಚನೆ: ಕುಂದಾಪುರ & ಬೈಂದೂರು ತಾಲೂಕನ್ನು ಸೇರಿಸಿ ಕುಂದಾಪುರ ಎಂದೂ, ಉಡುಪಿ, ಬ್ರಹ್ಮಾವರ, ಕಾಪು ಸೇರಿಸಿ ಉಡುಪಿ ಎಂದೂ, ಕಾರ್ಕಳ & ಹೆಬ್ರಿ ತಾಲೂಕನ್ನು ಸೇರಿಸಿ ಕಾರ್ಕಳ ಎಂದು ಆರೋಗ್ಯ ಇಲಾಖೆ ಪರಿಗಣಿಸಿದೆ.

 

Exit mobile version