Kundapra.com ಕುಂದಾಪ್ರ ಡಾಟ್ ಕಾಂ

ರಾಜ್ಯದಲ್ಲಿ ಜೂ.14ರಿಂದ ಅನ್ವಯವಾಗುವಂತೆ ಕೋವಿಡ್ ಹೊಸ ಮಾರ್ಗಸೂಚಿ ಬಿಡುಗಡೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೆಂಗಳೂರು: ರಾಜ್ಯದಲ್ಲಿ 11 ಜಿಲ್ಲೆ ಹೊರತುಪಡಿಸಿ ಕೊವೀಡ್ ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಅನ್ ಲಾಕ್, ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಗೆ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಜೂನ್ 14ರಿಂದ ಈ ನಿಯಮಗಳು ಜಾರಿಗೆ ಬರಲಿದ್ದು ಚಿಕ್ಕಮಗಳೂರು, ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ ಮತ್ತು ಬೆಳಗಾವಿ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಗೆ ಅನ್ವಯವಾಗಲಿದೆ.

ರಾತ್ರಿ ಏಳರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ತುರ್ತು ಪರಿಸ್ಥಿತಿ ಹೊರತುಪಡಿಸಿ ಯಾರಿಗೂ ಸಂಚಾರಕ್ಕೆ ಅವಕಾಶವಿಲ್ಲ. ಈ ಅವಧಿಯಲ್ಲಿ ಕಾರ್ಖಾನೆಗಳು ಕೆಲಸ ನಿರ್ವಹಿಸಬಹುದು. ಕೆಲಸಗಾರರು ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.

ಶುಕ್ರವಾರ ರಾತ್ರಿ 7ರಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಅಗತ್ಯ ಸೇವೆ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರಸ್ಥರರು, ಮದ್ಯದಂಗಡಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಹಂತ ಹಂತವಾಗಿ ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳನ್ನು ಅನ್ ಲಾಕ್ ಮಾಡುವ ಬಗ್ಗೆ ಗುರುವಾರ ಸಂಜೆ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದು ಇಂದು ಮಾರ್ಗಸೂಚಿ ಹೊರಡಿಸಲಾಗಿದೆ.

 

Exit mobile version