Kundapra.com ಕುಂದಾಪ್ರ ಡಾಟ್ ಕಾಂ

ಲಾಕ್‌ಡೌನ್‌ನ ಪರಿಷ್ಕೃತ ನಿಯಮಗಳ ಬಗ್ಗೆ ಧ್ವನಿವರ್ಧಕ ಮೂಲಕ ಮಾಹಿತಿ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಇಂದಿನಿಂದ ಕರೋನಾ ಲಾಕ್‌ಡೌನ್‌ನ ಪರಿಷ್ಕೃತ ನಿಯಮ ಜಾರಿಯಾಗಲಿದ್ದು, ಗಂಗೊಳ್ಳಿ ಗ್ರಾಮ ಪಂಚಾಯತ್ ಮತ್ತು ಗಂಗೊಳ್ಳಿ ಪೊಲೀಸ್ ಠಾಣೆ ವತಿಯಿಂದ ಗಂಗೊಳ್ಳಿ ಜನರಿಗೆ ಧ್ವನಿವರ್ಧಕದ ಮೂಲಕ ಮಾಹಿತಿ ನೀಡಲಾಯಿತು.

ಇಂದಿನಿಂದ 21ರವರೆಗೆ ಹೊಸ ನಿಯಮಾವಳಿಗಳು ಜಾರಿಯಾಗುತ್ತಿದ್ದು, ಈ ದಿನಗಳಲ್ಲಿ ಮಧ್ಯಾಹ್ನ 2ಗಂಟೆಯೊಳಗೆ ಅಗತ್ಯ ವಸ್ತು ಖರೀದಿಗೆ ಅವಕಾಶ, ಸಂಜೆ 7ರಿಂದ ಬೆಳಿಗ್ಗೆ 5ಗಂಟೆ ತನಕ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಜನರಿಗೆ ಮಾಹಿತಿ ನೀಡಲಾಗಿದ್ದು, ಜನರು ಕಟ್ಟುನಿಟ್ಟಾಗಿ ಸರಕಾರದ ಮತ್ತು ಜಿಲ್ಲಾಡಳಿತದ ಆದೇಶವನ್ನು ಪಾಲಿಸುವಂತೆ ಕೋರಲಾಯಿತು.

ಈ ಸಂದರ್ಭ ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ, ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಗಂಗೊಳ್ಳಿ ಪೊಲೀಸ್ ಠಾಣೆಯ ಉಪನಿರೀಕ್ಷಕ ನಂಜಾ ನಾಯ್ಕ್, ಪ್ರಪಬೆಷನರಿ ಎಸ್‌ಐ ವಿನಯ್, ಗ್ರಾಪಂ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಪಂ ಸಿಬ್ಬಂದಿಗಳು, ಪೊಲೀಸ್ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Exit mobile version