Site icon Kundapra.com ಕುಂದಾಪ್ರ ಡಾಟ್ ಕಾಂ

ಗಂಗೊಳ್ಳಿ ಗ್ರಾ.ಪಂನ ದಾರಿದೀಪ ನಿರ್ವಹಣೆಗಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್‌ನಿಂದ ಸಹಾಯಧನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಗ್ರಾಮ ಪಂಚಾಯತ್‌ನ ದಾರಿದೀಪ ನಿರ್ವಹಣೆಗಾಗಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ 25 ಸಾವಿರ ರೂ. ಕೊಡುಗೆಯಾಗಿ ನೀಡಲಾಯಿತು.

ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಯಶಪಾಲ ಸುವರ್ಣ ಬ್ಯಾಂಕಿನ ವತಿಯಿಂದ 25 ಸಾವಿರ ರೂ. ಚೆಕ್‌ನ್ನು ಗಂಗೊಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀನಿವಾಸ ಖಾರ್ವಿ ಅವರಿಗೆ ಗಂಗೊಳ್ಳಿ ಗ್ರಾಮ ಪಂಚಾಯತ್‌ನಲ್ಲಿ ಹಸ್ತಾಂತರಿಸಿದರು.

ಗ್ರಾಮ ಪಂಚಾಯತ್ ಕೋರಿಕೆ ಮೇರೆಗೆ ಗಂಗೊಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ದಾರಿದೀಪ ನಿರ್ವಹಣೆಗೆ ಬ್ಯಾಂಕ್ ವತಿಯಿಂದ ಕೊಡುಗೆಯನ್ನು ನೀಡಲಾಗಿದ್ದು, ಉತ್ತಮ ಗುಣಮಟ್ಟದ ದಾರಿದೀಪಗಳನ್ನು ಅಳವಡಿಸಿ ಸುವ್ಯವಸ್ಥಿತವಾಗಿ ಇದರ ನಿರ್ವಹಣೆ ಮಾಡಬೇಕು. ಗಂಗೊಳ್ಳಿ ಗ್ರಾಮದ ಅಭಿವೃದ್ಧಿ ಬ್ಯಾಂಕ್ ವತಿಯಿಂದ ಹಾಗೂ ವೈಯಕ್ತಿಕವಾಗಿ ಸಹಕಾರ ನೀಡಲಾಗುವುದು ಎಂದರು.

ಗಂಗೊಳ್ಳಿ ಗ್ರಾಪಂ ಉಪಾಧ್ಯಕ್ಷೆ ಪ್ರೇಮಾ ಸಿ.ಪೂಜಾರಿ, ಸದಸ್ಯರಾದ ಬಿ.ಗಣೇಶ ಶೆಣೈ, ಬಿ.ಲಕ್ಷ್ಮೀಕಾಂತ ಮಡಿವಾಳ, ಕೇಶವ ಖಾರ್ವಿ, ಪ್ರಶಾಂತ ಖಾರ್ವಿ, ಮಂತಿ ಶ್ರೀನಿವಾಸ ಖಾರ್ವಿ, ಬಿ.ರಾಘವೇಂದ್ರ ಪೈ, ಪಿಡಿಒ ಉಮಾಶಂಕರ, ಗಂಗೊಳ್ಳಿ ಪ್ರಾಥಮಿಕ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ, ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್ ಶಾಖಾ ಪ್ರಬಂಧಕ ಪ್ರಭಾಕರ, ಗ್ರಾಪಂ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

Exit mobile version