Site icon Kundapra.com ಕುಂದಾಪ್ರ ಡಾಟ್ ಕಾಂ

ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪಶು ಪಾಲನಾ ಇಲಾಖಾ ವತಿಯಿಂದ, ಮೈಸೂರಿನ ಪಿಂಜರಾಪೋಲ್ ಹಾಗೂ ಇತರ ಗೋಶಾಲೆಗಳಿಗೆ ಬೆಂಬಲ ನೀಡುವ ಯೋಜನೆಯಡಿ ನೋಂದಾಯಿತ ಟ್ರಸ್ಟ್‌ನ ಹೆಸರಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಗೋಶಾಲೆಯವರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ ಮೂರು ವರ್ಷಗಳಿಂದ 50 ಕ್ಕೂ ಹೆಚ್ಚು ಸ್ವದೇಶಿ ಜಾನುವಾರುಗಳನ್ನು ಪೋಷಿಸುತ್ತಿರುವ ಅರ್ಹ ನೋಂದಾಯಿತ ಟ್ರಸ್ಟ್‌ಗಳು ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 22 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರ ಕಚೇರಿ ದೂರವಾಣಿ ಸಂಖ್ಯೆ: 0820-2534024 ಅನ್ನು ಸಂಪರ್ಕಿಸುವಂತೆ ಪಶುಪಾಲನಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version