Site icon Kundapra.com ಕುಂದಾಪ್ರ ಡಾಟ್ ಕಾಂ

ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಸಹಾಯಧನ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರಿಶ್ಚಿಯನ್ ಅಭಿವೃದ್ಧಿ ಯೋಜನೆಯಡಿ ಜಿಲ್ಲೆಯಲ್ಲಿ 11 ವರ್ಷ ಮೇಲ್ಪಟ್ಟ ಚರ್ಚ್ ನವೀಕರಣ, ಆವರಣ ಗೋಡೆ, ಸ್ಮಶಾನ ಆವರಣ ಗೋಡೆ, ಸಮುದಾಯ ಭವನ, ಅನಾಥಾಶ್ರಮ ಮತ್ತು ವೃದ್ಧಾಶ್ರಮಗಳಿಗೆ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವನೆಗಳನ್ನು ಜಿಲ್ಲಾ ಕಛೇರಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ, ದೂರವಾಣಿ ಸಂಖ್ಯೆ: 0820-2573596 ಅನ್ನು ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version