Site icon Kundapra.com ಕುಂದಾಪ್ರ ಡಾಟ್ ಕಾಂ

ಸಾಗರ್ ಕ್ರೆಡಿಟ್ ಕೋ-ಆಪರೇಟಿವ್‌ನಿಂದ ಆರೋಗ್ಯ ಕೇಂದ್ರಗಳಿಗೆ ಅಗತ್ಯ ಪರಿಕರ ಕೊಡುಗೆ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ಹಾಗೂ ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೇಕಾಗುವ ಒಟ್ಟು 40,000 ರೂ. ಮೊತ್ತದ ಅಗತ್ಯ ಪರಿಕರಗಳನ್ನು ಹಸ್ತಾಂತರಿಸಲಾಯಿತು.

ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಅಧ್ಯಕ್ಷ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅಗತ್ಯ ಪರಿಕರಗಳನ್ನು ವೈದ್ಯಾಧಿಕಾರಿಗಳಿಗೆ ಹಸ್ತಾಂತರಿಸಿದರು.

ಈ ಸಂದರ್ಭ ಉಪಾಧ್ಯಕ್ಷ ಎಸ್. ರಾಜು ಪೂಜಾರಿ, ಶಿರೂರು ಗ್ರಾ.ಪಂ ಅಧ್ಯಕ್ಷೆ ದಿಲ್ಶಾದ್ ಬೇಗಂ, ಬೈಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಂದಿನಿ, ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಹನಾ, ಶಿರೂರು ಗ್ರಾ.ಪಂ ಉಪಾಧ್ಯಕ್ಷ ರವೀಂದ್ರ ಶೆಟ್ಟಿ, ನಿರ್ದೇಶಕರಾದ ಚಿಕ್ಕು ಪೂಜಾರಿ, ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ಶಿರೂರು ಶಾಖೆಯ ವ್ಯವಸ್ಥಾಪಕ ನಾಗರಾಜ ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.

Exit mobile version