Kundapra.com ಕುಂದಾಪ್ರ ಡಾಟ್ ಕಾಂ

ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶ ವೀಕ್ಷಿಸಿದ ಕೇಂದ್ರ ತಂಡ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಜಿಲ್ಲೆಯಲ್ಲಿ ತೌಕ್ತೆ ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಇಂದು ಭೇಟಿ ನೀಡಿದ ಕೇಂದ್ರ ತಂಡವು, ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು.

ಕೇಂದ್ರ ತಂಡದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಸೂಪರಿಟೆಂಡೆಂಟ್ ಇಂಜನಿಯರ್ ಸದಾನಂದ ಬಾಬು, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಪೊನ್ನು ಸ್ವಾಮಿ ಹಾಗೂ ಇವರೊಂದಿಗೆ ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಆಯುಕ್ತ ಮನೋಜ್ ರಾಜನ್, ರಾಜ್ಯ ವಿಪತ್ತು ನಿರ್ವಹಣಾ ವಿಭಾಗದ ಹಿರಿಯ ವಿಜ್ಞಾನಿ ಡಾ.ಶ್ರೀನಿವಾಸ ರೆಡ್ಡಿ ಇದ್ದರು.

ಬೈಂದೂರು ತಾಲೂಕಿನ ಬೈಂದೂರು, ಉಪ್ಪುಂದ, ಮೆಡಿಕಲ್, ಮರವಂತೆ, ಕಾಪು ತಾಲೂಕಿನ ಕಾಪುಲೈಟ್ ಹೌಸ್, ಕೈಪುಂಜಾಲು ಉಡುಪಿ ತಾಲೂಕಿನ ಪಡುಬಿದ್ರೆ ಬೀಚ್ ಮತ್ತು ಬ್ಲೂ ಫ್ಲಾಗ್ ಬೀಚ್ ಗೆ ಭೇಟಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ವಿಬಾಗಾಧಿಕಾರಿ ರಾಜು , ಬೈಂದೂರು ತಹಸೀಲ್ದಾರ್ ಶೋಭಾಲಕ್ಷಿ ಎಚ್. ಎಸ್., ಉಡುಪಿ ತಹಸೀಲ್ದಾರ್ ಪ್ರದೀಪ್ ಕುರ್ಡೆಕರ್, ಕಾಪು ತಹಸೀಲ್ದಾರ್ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು.


Exit mobile version