Kundapra.com ಕುಂದಾಪ್ರ ಡಾಟ್ ಕಾಂ

ಮಾಜಿ ಸೈನಿಕರಿಗೆ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೇಂದ್ರ ಸರ್ಕಾರದ ಬ್ಯೂರೋ ಆಫ್ ಇಮಿಗ್ರೇಶನ್ ರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಸಿಸ್ಟೆಂಟ್/ ಐ.ಎ ಮತ್ತು ಇಮಿಗ್ರೇಶನ್ ಸಪೋರ್ಟ್/ ಐ.ಎಸ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಿ.ಜಿ.ಆರ್ ವೆಬ್ಸೈಟ್ ಅಥವಾ ಜಂಟಿ ನಿರ್ದೇಶಕರ ಕಾರ್ಯಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಮಂಗಳೂರು ಇವರನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Exit mobile version