ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಹಾಗೂ ಇಂಚರ ಇಕೋ ಕ್ಲಬ್ ಇವರ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹೆಸ್ಕತ್ತೂರಿನಲ್ಲಿ ವನ ಮಹೋತ್ಸವ ಕಾರ್ಯಕ್ರಮ ನಡೆಯಿತು.
ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರ ಅಧ್ಯಕ್ಷರಾದ ರೊ. ನಳಿನ್ ಕುಮಾರ್ ಶೆಟ್ಟಿ ಹಾಗೂ ನಿಯೋಜಿತ ಅಧ್ಯಕ್ಷರಾದ ರೊ. ಎಚ್ ರವೀಶ್ಚಂದ್ರ ಶೆಟ್ಟಿ ಜೊತೆಯಾಗಿ ಹೊಂಗೆ ಗಿಡಗಳನ್ನು ನೆಡುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷರಾದ ವಿಠಲ ಕುಲಾಲ ವಹಿಸಿದ್ದರು. ರೋಟರಿ ಕ್ಲಬ್ ಮಿಡ್ ಟೌನ್ ಕುಂದಾಪುರದ ಪೂರ್ವಾಧ್ಯಕ್ಷರು ಹಾಗೂ ವಲಯ 1 ರ ನಿಯೋಜಿತ ಸಹಾಯಕ ಗವರ್ನರ್ ರೊ. ಜಯಪ್ರಕಾಶ್ ಶೆಟ್ಟಿ ವೈ, ಕಾರ್ಯದರ್ಶಿ ರೊ. ನಿರಂಜನ್ ಶೆಟ್ಟಿ , ಹುಣಸೆಮಕ್ಕಿ ಸಮೂಹ ಸಂಪನ್ಮೂಲ ವ್ಯಕ್ತಿ ರಾಜೀವ ಕುಲಾಲ, ಶಾಲಾ ಎಸ್ ಡಿ ಎಂ ಸಿ ಸದಸ್ಯರು, ಸಹಶಿಕ್ಷಕರಾದ ಸಂಜೀವ ಎಂ, ಜಯಲಕ್ಷ್ಮಿ ಬಿ., ವಿಜಯಾ ಆರ್, ವಿಜಯ ಶೆಟ್ಟಿ ಉಪಸ್ಥಿತರಿದ್ದರು.
ಮುಖ್ಯ ಶಿಕ್ಷಕ ಶೇಖರ ಕುಮಾರ್ ಸ್ವಾಗತಿಸಿದರು. ಇಂಚರ ಇಕೋ ಕ್ಲಬ್ ಸಂಚಾಲಕ ಶಿಕ್ಷಕರಾದ ಜಯರಾಮ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಹಶಿಕ್ಷಕರಾದ ರವೀಂದ್ರ ನಾಯಕ್ ವಂದಿಸಿ, ಅಶೋಕ ತೆಕ್ಕಟ್ಟೆ ನಿರೂಪಿಸಿದರು.