Site icon Kundapra.com ಕುಂದಾಪ್ರ ಡಾಟ್ ಕಾಂ

ಕುಂದಾಪುರ ರೋಟರಿ ಕ್ಲಬ್ ಮಿಡ್ ಟೌನ್‌ನಿಂದ ಅನ್ನದಾನ

ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಟ್ಟಿಯಂಗಡಿ ‘ನಮ್ಮ ಭೂಮಿ’ಸಂಸ್ಥೆಯ ಮಕ್ಕಳಿಗೆ ಒಂದು ದಿನದ ಅನ್ನದಾನ ನೀಡುವ ಮೂಲಕ 2021-22ನೇ ಸಾಲಿನ ಕುಂದಾಪುರ ರೋಟರಿ ಮಿಡ್ ಟೌನ್ ಇದರ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಕುಂದಾಪುರ ರೋಟರಿ ಮಿಡ್ ಟೌನ್ ಅಧ್ಯಕ್ಷರಾದ ರೋ| ಎಡಿವಿ ರವೀಶ್ಚಂದ್ರ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ, ನಮ್ಮ ರೋಟರಿ ಸಂಸ್ಥೆಯ ಪ್ರಥಮ ಕಾರ್ಯಕ್ರಮದ ಅಂಗವಾಗಿ, ನಮ್ಮ ಭೂಮಿ ಸಂಸ್ಥೆಯ ಮಕ್ಕಳಿಗೆ ಅನ್ನದಾನ ಮಾಡುವ ಮೂಲಕ ಚಾಲನೆಯನ್ನು ನೀಡಿದ್ದೇವೆ. ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ಸೇವೆಗಳನ್ನು ಮಾಡುವ ಮೂಲಕ ಸಮಾಜಕ್ಕೆ ಮಾದರಿ ಕಾರ್ಯಕ್ರಮಗಳನ್ನು ನೀಡಲಿದ್ದೇವೆ ಎಂದರು.

ಈ ಸಂಧರ್ಭ ರೋಟರಿ ಜಿಲ್ಲೆ 3182 ಝೋನ್ 1ರ ಅಸಿಸ್ಟೆಂಟ್ ಗವರ್ನರ್  ಪಿಎಚ್‌ಎಫ್ ರೋ| ಜಯಪ್ರಕಾಶ್ ಶೆಟ್ಟಿ, ಜಿಲ್ಲಾ ಪ್ರಾಜೆಕ್ಟ್ ಕಮಿಟಿ ಸದಸ್ಯರಾದ ಪಿಎಚ್‌ಎಫ್  ರೋ|ಶಿವರಾಮ ಶೆಟ್ಟಿ ಹಾಗೂ ಕಾರ್ಯದರ್ಶಿ ರೋ| ಎಡಿವಿ ರವಿ ಶೆಟ್ಟಿ ಮಚ್ಚಟ್ಟು ಉಪಸ್ಥಿತರಿದ್ದರು.

Exit mobile version